ಅಚ್ರಪ್ಪಾಡಿ ಸ.ಕಿ ಪ್ರಾ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀಮತಿ. ಶಶಿಕಲಾ ಕೃಷ್ಣ (ಶಾಲೆಯ ಮುಖ್ಯಶಿಕ್ಷಕರ ತಾಯಿ) ಇವರು ಯೋಗ ದಿನಾಚರಣೆ ಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಸರಳ ಯೋಗ ಹಾಗೂ ಪ್ರಾಣಾಯಾಮಗಳನ್ನು ಮಕ್ಕಳಿಗೆ ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ತಾಯಂದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪರಶುರಾಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಲಾ ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಶುಭಾಶಯ ಹೇಳಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ರವರು ಮಾತನಾಡಿ ಯೋಗ ದಿನಾಚರಣೆಯ ಬಗ್ಗೆ ಹಾಗೂ ಯೋಗಾಸನದಿಂದ ಮನಸ್ಸು-ದೇಹಕ್ಕಾಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಗೌರವ ಶಿಕ್ಷಕಿ ಪೃಥ್ವಿ,ಅಚ್ರಪ್ಪಾಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಂದರಿ ಮತ್ತು ಸಹಾಯಕಿ ಶ್ರೀಮತಿ ರತ್ನಾವತಿ,ಶಾಲಾ ಅಡುಗೆ ಸಿಬ್ಬಂದಿಗಳಾದ ಶ್ರೀಮತಿ ಸರಸ್ವತಿ ಮತ್ತು ಶ್ರೀಮತಿ ಶುಭಲಕ್ಷ್ಮಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀಮತಿ ಶಶಿಕಲಾ ಕೃಷ್ಣರವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ಸ್ವಾಗತಿಸಿ, ಅತಿಥಿ ಶಿಕ್ಷಕಿ ಶ್ರೀಮತಿ ಝಾನ್ಸಿ ಕೆ. ಡಿ ಧನ್ಯವಾದ ಸಮರ್ಪಿಸಿದರು.
- Monday
- November 25th, 2024