Ad Widget

ಕುಕ್ಕುಜಡ್ಕ : ಪರಿಸರ ಕಾರ್ಯಕ್ರಮದ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ದೊಡ್ಡತೋಟ ವಲಯದ ಪರಿಸರ ಕಾರ್ಯಕ್ರಮದ ಅಡಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕ ಇಲ್ಲಿ ಜೂ.22 ರಂದು ಪರಿಸರ ಕಾರ್ಯಕ್ರಮದ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಯೋಜನೆಯ ಕೃಷಿ ಮೇಲ್ವಿಚಾರಕರಾದ ರಮೇಶ್ ಅವರು ಪರಿಸರ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕಿ ಶ್ರೀಮತಿ ರತ್ನಾವತಿ ಪರಿಸರ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಾವತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ ವಲಯ ಮೇಲ್ವಿಚಾರಕರಾದ ಸೀತಾರಾಮ್ ಕಾನಾವು, ಸೇವಾಪ್ರತಿನಿಧಿ ಶ್ರೀಮತಿ ಹರ್ಷಿತಾ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಮಚಂದ್ರ ಅವರು ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡುವ ಮೂಲಕ ಮಕ್ಕಳಿಗೆ ಪರಿಸರ ಜಾಗೃತಿಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!