ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಹಗ್ಗಜಗ್ಗಾಟ ಪಂದ್ಯಾಟದ ಸಮಾರೋಪ ಸಮಾರಂಭ 23 -06-22 ರಂದು ಸಂಜೆ ನಡೆಯಿತು. ಸಮಾರಂಭದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ ಗೌಡ, ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ ಮಾಣಿಬೆಟ್ಟು, ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ, ಐಕ್ಯೂಎಸಿ ಸಂಚಾಲಕಿ ಮಮತಾ ಕೆ ವಂದಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡಿನ ದೈಹಿಕ ಶಿಕ್ಷಣ ನಿರ್ದೇಶಕ ರೋಷನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಪದ್ಯಾಂಟದ ಫಲಿತಾಂಶ:
ಪುರುಷರ ವಿಭಾಗ:
ಪ್ರಥಮ: ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ
ದ್ವಿತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ,
ತೃತೀಯ: ಆಳ್ವಾಸ್ ಕಾಲೇಜು, ಮೂಡುಬಿದ್ರೆ
ಚತುರ್ಥ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ
ಮಹಿಳಾ ವಿಭಾಗ:
ಪ್ರಥಮ: ಆಳ್ವಾಸ್ ಕಾಲೇಜು, ಮೂಡಬಿದಿರೆ
ದ್ವಿತೀಯ: ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ
ತೃತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು
ಚತುರ್ಥ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ