
ಸಂಪಾಜೆ ಗ್ರಾಮದಲ್ಲಿ ಭೂಕಂಪದಿಂದ ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಅನಿತಾ ಲಕ್ಷ್ಮಿ ಹಾಗೂ ಸಬ್ ಇನ್ಸ್ಪೆಕ್ಟರ್ ದಿಲೀಪ್ ಭೇಟಿ ನೀಡಿ ಜನರಲ್ಲಿ ಮುಂಜಾಗ್ರತೆ ಬಗ್ಗೆ ಮಾಹಿತಿಯನ್ನು ನೀಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಗ್ರಾಮ ಕರಣಿಕರಾದ ಮಿಯಾ ಸಾಬ್ ಮುಲ್ಲಾ, ಪಂಚಾಯತ್ ಸದಸ್ಯರುಗಳಾದ ಎಸ್. ಕೆ. ಹನೀಫ್, ಜಗದೀಶ್ ರೈ, ಸವಾದ್, ರಹೀಮ್ ಬೀಜದಕಟ್ಟೆ, ಪ್ರಶಾಂತ್ ವಿ. ವಿ. , ತಾಲೂಕು ಆಡಳಿತದ ಇಲಾಖೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.