ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಜೂ.28 ರಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಯಕ್ಷಗಾನ ಕಲಾವಿದ ಹಾಗೂ ಶ್ರೀ ರಾಮ ಭಜನಾ ಮಂಡಳಿ ಕಲ್ಮಡ್ಕ ತಂಡದ ಸದಸ್ಯ ಪ್ರಸ್ತುತ ಗೌರವ ಶಿಕ್ಷಕರಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಡ್ಕದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಶ್ರೀನಿವಾಸ ಜೋಗಿಬೆಟ್ಟು ಮುಖ್ಯ ಅತಿಥಿಗಳಾಗಿ ಆಗಮಿಸಿ ತಮ್ಮ ಮಾತಿನ ಮೂಲಕ ಸುವಿಚಾರಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಶ್ರೀಯುತರು ಪ್ರಬಂಧ , ಕಥೆ ಕವನ ನಾಟಕ ಯಕ್ಷಗಾನ ಇತ್ಯಾದಿಗಳ ಬಗ್ಗೆ ಮಕ್ಕಳಿಗೆ ಮನಮುಟ್ಟುವಂತೆ ಮಾತನಾಡುತ್ತಾ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ವಹಿಸಿದ್ದರು. ಆಡಳಿತ ಮಂಡಳಿಯ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್, ಆಡಳಿತ ಮಂಡಳಿ ಕೋಶಾಧಿಕಾರಿ ರಾಧಾಕೃಷ್ಣ ರಾವ್ ಉಡುವೆಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಮುಖ್ಯ ಶಿಕ್ಷಕರಾದ ಶ್ರೀ ಯಶೋಧರ ನಾರಾಲು ಸರ್ವರನ್ನು ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ಸಂಘದ ಸಂಚಾಲಕರಾದ ಶ್ರೀ ಲೋಕೇಶ್ ಬೆಳ್ಳಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ನಾಯಕ ಜನಕ ಕೆ ವಂದಿಸಿದರು. ವಿದ್ಯಾರ್ಥಿನಿಯರಾದ ಸಾಯಿ ಸ್ವಾತಿ ಶೆಟ್ಟಿ ಮತ್ತು ಸೃಷ್ಟಿ ಪ್ರಾರ್ಥನೆ ಮಾಡಿದರು. 10ನೇ ತರಗತಿ ವಿದ್ಯಾರ್ಥಿನಿ ಇಂಚರ ಕೆ ವಿ ಕಾರ್ಯಕ್ರಮ ನಿರೂಪಿಸಿದರು.