ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಜೂನ್ 28ರಂದು ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ವಿಜ್ಞಾನ ಶಿಕ್ಷಕಿ ಶ್ರೀಮತಿ ಸಾವಿತ್ರಿ ಕೆ ರವರು ಭಾಗವಹಿಸಿ ‘ಇರುವುದೊಂದೇ ಭೂಮಿ’ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವಿದ್ಯಾಬೋಧಿನೀ ವಿದ್ಯಾಸಂಸ್ಥೆ ಗಳ ಕೋಶಾಧಿಕಾರಿ ಶ್ರೀ ರಾಧಾಕೃಷ್ಣ ಯು ಪರಿಸರದ ಕಾಳಜಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಬೋಧಿನೀ ಸಂಸ್ಥೆಗಳ ಅಧ್ಯಕ್ಷರಾದ ವೆಂಕಟ್ರಮಣ ಭಟ್ ನೆಟ್ಟಾರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಶಿಕ್ಷಕ ಶ್ರೀ ಯಶೋಧರ ನಾರಾಲು ಸ್ವಾಗತಿಸಿದರು. ಶಿಕ್ಷಕ ಶ್ರೀ ಮೋಹನ್ ಕೆ ಸಿ ಪ್ರಸ್ತಾವನೆಗೈದರು. ವಿದ್ಯಾರ್ಥಿನಿಯರಾದ ಮೋಕ್ಷ ಮತ್ತು ಚೈತನ್ಯ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪಲ್ಲವಿ ಕೆ ಎಸ್ ವಂದಿಸಿದರು.