
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಗಳು ಇಲ್ಲದೆ ಮಳೆಯ ನೀರು ಸಂಪೂರ್ಣವಾಗಿ ರಸ್ತೆಗಳಲ್ಲಿ ಹರಿಯುತ್ತಿದ್ದು ರಸ್ತೆಯೇ ಕೊಚ್ಚಿಹೊಗುವಂತಿದೆ. ನೆಟ್ಟಾರಿನಿಂದ ದರ್ಖಾಸು ವರೆಗೆ ರಸ್ತೆಯ ಎರಡು ಕಡೆಗಳಲ್ಲಿ ಪೊದೆಗಳು ತುಂಬಿ ಹೋಗಿದ್ದು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿಗಳು ಎದುರಾಗಿದೆ ಆದುದರಿಂದ ಲೋಕೋಪಯೋಗಿ ಇಲಾಖೆ ಕೂಡಲೇ ವ್ಯವಸ್ಥಿತ ಚರಂಡಿ ವ್ಯವಸ್ಥೆಯನ್ನು ಮತ್ತು ಪೊದೆಗಳನ್ನು ಕಡಿದು ನಡೆದಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೆ ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ,ಎಸ್ ಡಿಪಿಐ ಗ್ರಾಮ ಸಮಿತಿ ಉಪಾಧ್ಯಕ್ಷ ಶಫೀಕ್ ಬೆಳ್ಳಾರೆ , ಪಳ್ಳಿಮಜಲು ಬೂತ್ ಸಮಿತಿಯ ಜೊತೆ ಕಾರ್ಯದರ್ಶಿ ಹಾರಿಸ್ ಪಳ್ಳಿಮಜಲು ಉಪಸ್ಥಿತರಿದ್ದರು.