Ad Widget

ಕಟ್ಟ ಗೋವಿಂದನಗರ : ನೂತನ ಒಕ್ಕೂಟದ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕಟ್ಟ ಗೋವಿಂದನಗರ ಒಕ್ಕೂಟದ ನೂತನ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.10 ರಂದು ನಡೆಯಿತು.
ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ಶ್ರೀ ಕೃಷ್ಣಮೂರ್ತಿ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರಾದ ಜಯಪ್ರಕಾಶ್ ಕಟ್ಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಚಂದ್ರಶೇಖರ ಕಟ್ಟ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಕೃಷಿ ಅಧಿಕಾರಿಗಳಾದ ರಮೇಶ್ ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್ ಅವರುಗಳು ಭಾಗವಹಿಸಿದ್ದರು.
ಕಟ್ಟ ಗೋವಿಂದನಗರ ಒಕ್ಕೂಟದ ನಿರ್ಗಮಿತ ಅಧ್ಯಕ್ಷರಾದ ಶ್ರೀಮತಿ ಮೋಹಿನಿ, ಕಟ್ಟ ಗೋವಿಂದನಗರ ಒಕ್ಕೂಟದ ನೂತನ ಅಧ್ಯಕ್ಷರಾದ ಮಣಿಕಂಠ ಕಟ್ಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಟ್ಟ ಗೋವಿಂದನಗರ ಒಕ್ಕೂಟದ ಸದಸ್ಯರುಗಳು, ಸೇವಾಪ್ರತಿನಿಧಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್.ಕೆ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ ಕಟ್ಟ ಸ್ವಾಗತಿಸಿ ಸೇವಾಪ್ರತಿನಿಧಿ ಪದ್ಮಾವತಿ ಧನ್ಯವಾದ ಸಮರ್ಪಿಸಿದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading