ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ರಜೆಯ ಬಳಿಕ ಇಂದು (ಜು.12) ಶಾಲೆಗಳು ಆರಂಭವಾಗಲಿದೆ. ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಸ್ಥಳೀಯವಾಗಿ ತುರ್ತು ಸಮಸ್ಯೆಗಳಿದ್ದರೆ ಮೇಲಧಿಕಾರಿಗಳಿಗೆ ತಿಳಿಸಿ ನಿರ್ಧಾರ ಕೈಗೊಳ್ಳಲು ಅವಕಾಶ ನೀಡಲಾಗಿದೆ.
- Thursday
- November 21st, 2024