Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಭೇಟಿ

ಸುಬ್ರಹ್ಮಣ್ಯ ಜು.11 : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜು.11 ರಂದು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರು ಭೇಟಿ ನೀಡಿದರು.

. . . . . . . . .

ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಸಚಿವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಅವರು ಸ್ವಾಗತಿಸಿದರು.

. . . . . . .

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖಾ ಕಾರ್ಯದರ್ಶಿ ಕೃಷ್ಣ ರೆಡ್ಡಿ, ಕುಕ್ಕೆ ದೇವಳದ ಸಹಾಯಕ ಕಾರ್ಯನಿರ್ವಹಣ ಸಮಿತಿಯ ಅಧ್ಯಕ್ಷ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವನಜಾ.ವಿ ಭಟ್, ಶ್ರೀವತ್ಸ ಬೆಂಗಳೂರು, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಮನೋಜ್ ಸುಬ್ರಹ್ಮಣ್ಯ, ಕಿಶೋರ್ ಕುಮಾರ್ ಕೂಜುಗೋಡು, ಸುಳ್ಯ ಬಿಜೆಪಿ ಪಂಚಾಯತ್ ಅಧ್ಯಕ್ಷರಾದ ಮಾಜಿ ಅಧ್ಯಕ್ಷರಾದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ರಾಜ್ಯ ರೈತ ಮೋರ್ಚಾದ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಸಂಪ್ಯಾಡಿ, ಶ್ರೀಕುಮಾರ್ ಬಿಲದ್ವಾರ, ಲೋಕೋಪಯೋಗಿ ಇಲಾಖಾ ಅಭಿಯಂತರರು ಮತ್ತು ಅಧಿಕಾರಿಗಳು ಇದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading