- Thursday
- November 21st, 2024
ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆಯಲ್ಲಿ ಜು.13 ಬುಧವಾರದಂದು ವೇದವ್ಯಾಸ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಸಹಶಿಕ್ಷಕರಾದ ಶ್ರೀ ಗುರುಪ್ರಸಾದ್ ಭಟ್ ಗುರು ಪೂರ್ಣಿಮೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಗುರುಗಳಾದ ಶ್ರೀ ಪ್ರಶಾಂತ್ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಶ್ರೀ ವಿನೋದ್ ಕುಮಾರ್ ಇವರು ಧನ್ಯವಾದಗೈದರು. ಸಹ ಶಿಕ್ಷಕರಾದ ಶ್ರೀ ಉಮೇಶ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಮಾವಿನಕಟ್ಟೆ ಬಸ್ ನಿಲ್ದಾಣದ ಬಳಿ ಒಣಗಿರುವ ಮರ ಅಪಾಯಕಾರಿ ಸ್ಥಿತಿಯಲ್ಲಿತ್ತು. ಇದನ್ನು ದೇವಚಳ್ಳ ಗ್ರಾಮ ಪಂಚಾಯತ್ ಸಹಕಾರದಿಂದ ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಪ್ರಶಾಂತ್ ಮಾವಿನಕಟ್ಟೆ, ಊರವರು,ಅರಣ್ಯ ಇಲಾಖೆ, ಮೆಸ್ಕಾಂ ಸಿಬ್ಬಂದಿಗಳು ಸಹಕರಿಸಿದರು.
ನಿಂತಿಕಲ್ಲಿನ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ಭುವನೇಶ್ ಕಡೀರ ಅವರ ಮಾಲಕತ್ವದಲ್ಲಿ ಜು.11 ರಂದು ಅಕ್ಷಯ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ಶುಭಾರಂಭಗೊಂಡಿತು. ಮಾಲಕರ ಮಾತೃಶ್ರೀ ಶ್ರೀಮತಿ ಶೇಷಮ್ಮ ಮೋನಪ್ಪ ಗೌಡ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ನ ಮಾಲಕರಾದ ಹಾಗೂ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವೆಂಕಪ್ಪ...
ಸುಳ್ಯ : ತಾಲೂಕಿನ ರೈತರು ಹೆಚ್ಚಾಗಿ ಅಡಿಕೆ ಕೃಷಿಯನ್ನೇ ಹೆಚ್ಚಾಗಿ ಅವಲಂಬಿಸಿದ್ದು ಈ ಬಾರಿ ಸುರಿದ ಕುಂಭದ್ರೋಣ ಮಳೆಗೆ ಅಡಿಕೆ ರಬ್ಬರ್ ಕೃಷಿಕರನ್ನು ಕಂಗಾಲಾಗಿಸಿದೆ. ಕೃಷಿ ಕೂಲಿ ಕಾರ್ಮಿಕರು ಕೂಡ ತೊಂದರೆಗೆ ಸಿಲುಕಿದ್ದಾರೆ. ವಿಪರೀತ ಮಳೆಯ ಪರಿಣಾಮದಿಂದ ತಾಲೂಕಿನ ವಿವಿಧೆಡೆ ಅಡಿಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ, ಕಲ್ಮಕಾರು, ಅಜ್ಜಾವರ, ಮರ್ಕಂಜ ಹಾಗೂ...