Ad Widget

ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ಆಯ್ಕೆಯಾದ ಡಾ. ಜಯಕರ್ ಅವರನ್ನು ಅಭಿನಂದಿಸಿದ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ

. . . . . . . . .

ಕರ್ನಾಟಕ ಸರಕಾರದ ಮಾನ್ಯ ರಾಜ್ಯಪಾಲರಾದ ಶ್ರೀ ತಾವರ್‌ಚಂದ್ ಗೆಹ್ಲೋಟ್ ಇವರಿಂದ ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ನೇಮಕಗೊಂಡ ಡಾ. ಜಯಕರ್ ಅವರನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು; ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನ
ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಕಚೇರಿಯಲ್ಲಿ ಕೆ.ವಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಡಾ. ಜಯಕರ್ ಅವರು ಕೆ.ವಿ.ಜಿ ಸಮೂಹ ವಿದ್ಯಾ ಸಂಸ್ಥೆಗಳ ಭಾಂಧವ್ಯ ಮತ್ತು ಸ್ಥಾಪಕ ಅಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಆತ್ಮೀಯತೆನ್ನು ನೆನಪಿಸಿಕೊಂಡು ಕೆ.ವಿ.ಜಿ ಸಮೂಹ ವಿದ್ಯಾಸಂಸ್ಥೆಗಳ ಪ್ರಗತಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಡಾ. ರೇಣುಕಾ ಪ್ರಸಾದ್ ಕೆ.ವಿ ಅವರು ಮಾತನಾಡಿ; ಕೆ.ವಿ.ಜಿ ಸಮೂಹ ವಿದ್ಯಾ ಸಂಸ್ಥೆಗಳ ಏಳಿಗೆಗೆ ಡಾ. ಜಯಕರ್‌ರವರು ನೀಡಿದ ಸಲಹೆ ಮತ್ತು ಮಾರ್ಗದರ್ಶನಗಳನ್ನು ಸ್ಮರಿಸಿಕೊಂಡು ಇನ್ನೂ ಮುಂದೆಯೂ ನಿಮ್ಮ ಸಹಕಾರ ಸದಾ ಇರಲೆಂದು ಬಯಸುತ್ತಾ ನಿಮಗೆ ಉನ್ನತ ಹುದ್ದೆಗಳ ಯೋಗ ಭಾಗ್ಯಗಳು ದೊರೆಯಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ಮತ್ತು ಕೆ.ವಿ.ಜಿ ಪಾಲಿಟೆಕ್ನಿಕ್ ಸಿಬ್ಬಂದಿ ಅರುಣ್
ಕುರುಂಜಿ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading