ನೈಋತ್ಯ ರೈಲ್ವೇಯ ಮೈಸೂರು ವಿಭಾಗದ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಜು.15 ರಂದು ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯ ಅಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಳಿಗೆ ಉದ್ಘಾಟನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ಹಿತರಕ್ಷಣಾ ವೇದಿಕೆ ಸಂಚಾಲಕ ಸುದರ್ಶನ್ ಮಳಿಗೆ ಉದ್ಘಾಟನೆ ಮಾಡಿದರು. ರೈಲು ಸ್ಟೇಷನ್ ಮಾಸ್ಟರ್ ಅಭಿನಂದನ್, ಸ್ಟೇಷನ್ ಮ್ಯಾನೇಜರ್ ಸಂಜೀವ್ ರಂಜನ್, ಸಾಮಾಜಿಕ ಕಾರ್ಯಕರ್ತ ಪ್ರಸಾದ್, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮಾರುಕಟ್ಟೆ ಜನರಲ್ ಮ್ಯಾನೇಜರ್ ಸುಧಾಕರ್, ಮಾರುಕಟ್ಟೆ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸಂದೇಶ್ ಉಪಸ್ಥಿತರಿದ್ದರು.
ಇಲ್ಲಿನ ಕೇಂದ್ರದಲ್ಲಿ ಸಿರಿ ಸಂಸ್ಥೆಯ ಉತ್ಪನ್ನಗಳು ಪ್ರಯಾಣಿಕರಿಗೆ ಲಭ್ಯವಾಗಲಿದ್ದು, ರೈಲ್ವೇ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಇದನ್ನು ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಪ್ರಾರಂಭಿಸಲಾಗಿದೆ.
ವರದಿ :- ಉಲ್ಲಾಸ್ ಕಜ್ಜೋಡಿ