ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಡಾ.ರೇಣುಕಾ ಪ್ರಸಾದ್ ಕೆ.ವಿ ರವರ ಆಡಳಿತದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎ.ಜಿ ಐ.ಟಿ.ಐ ಭಾಗಮಂಡಲದಲ್ಲಿ, ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಉಜ್ವಲ್ ಊರುಬೈಲು ರವರನ್ನು ಜು. 16ರಂದು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಾತನಾಡಿ, ಭಾಗಮಂಡಲ ಐ.ಟಿ.ಐ ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಯನ್ನಿತ್ತರು, ವಿದ್ಯಾರ್ಥಿಗಳಿಗೆ ಪ್ಲೇಸ್ಮೆಂಟ್ನ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಪ್ಲೇಸ್ಮೆಂಟ್ ತರಭೇತಿ ಕಾರ್ಯಾಗಾರವನ್ನು ಕಾಲೇಜಿನಲ್ಲಿ ಆಯೋಜಿಸಿ, ಇಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ವಿವಿಧ ಕಂಪೆನಿಗಳಿಂದ ನಡೆಯುವ ಪ್ಲೇಸ್ಮೆಂಟ್ನ ಮೂಲಕ ಒಳ್ಳೆಯ ಉದ್ಯೋಗವನ್ನು ಪಡೆಯಲು ಕಾಲೇಜಿನ ಸಿಬ್ಬಂಧಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂಬ ಸಲಹೆಯನ್ನು ನೀಡಿದರು.
ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಹೊಸ ವಿಭಾಗಗಳನ್ನು ತೆರೆಯುವ ಬಗ್ಗೆ ಚರ್ಚಿಸಿ ಉತ್ತಮ ರೀತಿಯ ಪ್ರಯೋಗಾಲಯವನ್ನು ಅತ್ಯಂತ ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳ ಮತ್ತು ವಿದ್ಯಾಸಂಸ್ಥೆಯ ಸರ್ವಾಂಗೀಣ ಪ್ರಗತಿಗೆ ಪೂರ್ವಕವಾಗುವಂತೆ ತೊಡಗಿಸಿಕೊಳ್ಳಬೇಕು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳ ಶ್ರಮದಿಂದ ಇದು ಒಂದು ಉತ್ತಮ ಕೈಗಾರಿಕಾ ತರಬೇತಿ ಸಂಸ್ಥೆಯಾಗಿ ಎಲ್ಲೆಡೆ ಗುರುತಿಸುವಂತಾಗಲು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ವಿದ್ಯಾ ಸಂಸ್ಥೆಯು ಅಭಿವೃದ್ಧಿಯ ಪಥದಲ್ಲಿ ಮುಂದುವರಿಯಲಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಕಾಂತ್ ಕುಡೆಕಲ್ಲು,ಸುಳ್ಯದ ಎ.ಒ.ಎಲ್.ಇ ಆಡಳಿತಾಧಿಕಾರಿ ಶ್ರೀ ಪ್ರಸನ್ನ ಕಲ್ಲಾಜೆ ಮತ್ತು ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದರು.