Ad Widget

ದೊಡ್ಡತೋಟ :- ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ನೂತನ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕಿನ ದೊಡ್ಡತೋಟ ವಲಯದ ಮಿತ್ತಡ್ಕ, ಗಟ್ಟಿಗಾರು, ನೆಲ್ಲೂರು ಕೆಮ್ರಾಜೆ, ದೊಡ್ಡತೋಟ, ದುಗ್ಗಲಡ್ಕ, ಸೋಣಂಗೇರಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸತ್ಯನಾರಾಯಣ ದೇವರ ಪೂಜೆಯು ಜು.18 ರಂದು ರೆಂಜಾಳ ಶ್ರೀ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ದೊಡ್ಡತೋಟ ಒಕ್ಕೂಟದ ವಲಯಾಧ್ಯಕ್ಷರು ಹಾಗೂ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ಭಾಸ್ಕರ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಇದರ ನಿರ್ದೇಶಕರಾದ ಪ್ರವೀಣ್ ಕುಮಾರ್, ಕಾವೂರು ಶ್ರೀ ಮಹಾವಿಷ್ಣು ದೇವರು ವಗೈರೆ ಪಂಚಸ್ಥಾಪನೆ ಮರ್ಕಂಜ ಇದರ ಅಧ್ಯಕ್ಷರಾದ ರಾಘವ ಕಂಜಿಪಿಲಿ, ಜನಜಾಗೃತಿ ವೇದಿಕೆಯ ದೊಡ್ಡತೋಟ ವಲಯಾಧ್ಯಕ್ಷರಾದ ರಾಜಾರಾಮ್ ಭಟ್ ಬೆಟ್ಟ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿಷ್ಣು ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ನಿಕಟಪೂರ್ವ ವಲಯಾಧ್ಯಕ್ಷರಾದ ಜಗನ್ ಮೋಹನ್ ರೈ, ಜನಜಾಗೃತಿ ವೇದಿಕೆಯ ಮರ್ಕಂಜ ಗ್ರಾಮ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಸತೀಶ್ ರಾವ್ ದಾಸರಬೈಲು, ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪದ್ಮಪ್ರಿಯ, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶೀಲಾವತಿ, ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪವಿತ್ರ ಗುಂಡಿ ಇವರುಗಳು ಉಪಸ್ಥಿತರಿದ್ದರು.

. . . . . . . . .

ಈ ಸಂದರ್ಭದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೆಲ್ಲೂರು ಕೆಮ್ರಾಜೆ, ಗಟ್ಟಿಗಾರು, ಮಿತ್ತಡ್ಕ, ದೊಡ್ಡತೋಟ, ದುಗ್ಗಲಡ್ಕ ಕಾರ್ಯಕ್ಷೇತ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವಸದಸ್ಯರುಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ ವಲಯ ಮೇಲ್ವಿಚಾರಕರಾದ ಸೀತಾರಾಮ ಕಾನಾವು, ನೆಲ್ಲೂರು ಕೆಮ್ರಾಜೆ, ಗಟ್ಟಿಗಾರು, ದೊಡ್ಡತೋಟ, ದುಗ್ಗಲಡ್ಕ ಕಾರ್ಯಕ್ಷೇತ್ರಗಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ ವಲಯದ ಸೇವಾಪ್ರತಿನಿಧಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು, ಸರ್ವಸದಸ್ಯರುಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading