Ad Widget

ಕುಕ್ಕುಜಡ್ಕ :- ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ, ವ್ಯವಸ್ಥಾಪನಾ ಸಮಿತಿ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಜು.18 ರಂದು ಕುಕ್ಕುಜಡ್ಕ ಅಮರ ಸಹಕಾರಿ ಸಭಾಭವನದಲ್ಲಿ ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಬಾಲಕೃಷ್ಣ ಬೊಳ್ಳೂರು, ಗೌರವಾಧ್ಯಕ್ಷರಾಗಿ ಸತ್ಯನಾರಾಯಣ ಮೂರ್ತಿ ಅವರುಗಳನ್ನು ಆಯ್ಕೆ ಮಾಡಲಾಯಿತು.

. . . . . . .

ಆ. 06 ರಿಂದ ಆ. 13 ರವರೆಗೆ ಕುಕ್ಕುಜಡ್ಕದಲ್ಲಿ ಮದ್ಯವರ್ಜನ ಶಿಬಿರ ನಡೆಸುವುದು ಎಂದು ತೀರ್ಮಾನಿಸಲಾಯಿತು.

ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಎನ್.ಎ ರಾಮಚಂದ್ರ, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ್ ರೈ ಕಳಂಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪದ್ಮಪ್ರಿಯ, ಜನಜಾಗೃತಿ ವೇದಿಕೆಯ ದೊಡ್ಡತೋಟ ವಲಯಾಧ್ಯಕ್ಷರಾದ ರಾಜಾರಾಮ್ ಭಟ್ ಬೆಟ್ಟ, ಕೇಂದ್ರ ಒಕ್ಕೂಟದ ಅಧ್ಯಕ್ಷ ಯತೀಶ್ ರೈ ದುಗ್ಗಲಡ್ಕ, ವಲಯಾಧ್ಯಕ್ಷ ಭಾಸ್ಕರ ರಾವ್, ಸುಬ್ರಾಯ ನಾಯ್ಕ್, ವಲಯ ಜನಜಾಗೃತಿ ಅಧ್ಯಕ್ಷರಾದ ಗಣಪಯ್ಯ ಆನೇಕರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್ ಮನ್ಮಥ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಕೇಶವ ಕರ್ಮಾಜೆ, 269ನೇ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ದೇವಿಪ್ರಸಾದ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಜನಜಾಗೃತಿ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕುಕ್ಕುಜಡ್ಕ, ಪೈಲಾರು ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ತಾಲೂಕಿನ ಮೇಲ್ವಿಚಾರಕರು, ತಾಲೂಕಿನ ಎಲ್ಲಾ ವಲಯದ ಜನಜಾಗೃತಿ ವಲಯಾಧ್ಯಕ್ಷರುಗಳು, ಪದಾಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading