Ad Widget

ಕುಕ್ಕೆ: ಶ್ರೀ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದು ಮೃತ್ತಿಕಾ ಪ್ರಸಾದ ಪಡೆದರು.ನಂತರ ದೇವಳದಲ್ಲಿ ಉಪಹಾರ ಸ್ವೀಕರಿಸಿದರು.
ನಂತರ ದೇವಳದ ಆಡಳಿತ ಕಚೇರಿಗೆ ಆಗಮಿಸಿದ ಸಚಿವರನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ವನಜಾ.ವಿ.ಭಟ್, ಮಾಜಿ ಸದಸ್ಯ ಕಿಶೋರ್ ಶಿರಾಡಿ, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್, ಶಿಷ್ಠಾಚಾರ ವಿಭಾಗದ ಹರೀಶ್ ಉಪಸ್ಥಿತರಿದ್ದರು.
ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಪ್ರಸಾದ ಬೋಜನ ಸ್ವೀಕರಿಸಿದರು. ಶನಿವಾರ ಶ್ರೀ ದೇವರ ದರುಶನ ಪಡೆದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading