- Thursday
- November 21st, 2024
ಜೆ ಸಿ ಐ ಸುಳ್ಯ ಸಿಟಿ ವತಿಯಿಂದ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯ ಮತ್ತು ಬ್ರದರ್ಸ್ ಬಳ್ಳಡ್ಕ ರವರ ಸಹಯೋಗದೊಂದಿಗೆ ಬಳ್ಳಡ್ಕ ಗದ್ದೆಯಲ್ಲಿ ಕೆಸರ್ ಡ್ ಕಸರತ್ತ್ ಕ್ರೀಡಾಕೂಟ ಜು.24ರಂದು ನಡೆಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಸಿಟಿ ಅಧ್ಯಕ್ಷ ಬಶೀರ್ ಯುಪಿ ವಹಿಸಿದ್ದರು. ಶಿವರಾಮ ಬಳ್ಳಡ್ಕ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಉಬರಡ್ಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.24 ರಂದು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು...
ಸ್ವ ಉದ್ಯೋಗ ಮಾಡಲು ಸರಕಾರ ಸ್ವ ಸಹಾಯ ಸಂಘಗಳ ಮುಖಾಂತರ ಉತ್ತಮ ಅವಕಾಶ ನೀಡುತ್ತಿದೆ. ಮೀನುಗಾರಿಕೆ ಮುಖಾಂತರ ಉತ್ತಮ ಅವಕಾಶಗಳಿದೆ ಎಂದರು. ಸಹಕಾರ ಸಂಘಗಳಲ್ಲೂ ಸ್ವ ಉದ್ಯೋಗಕ್ಕೆ ಸಾಲ ನೀಡುವಂತಾಗಲೂ ಸರಕಾರ ಕಾನೂನು ರೂಪಿಸುತ್ತಿದೆ ಎಂದರು.ಅವರು ಜು.24 ರಂದು ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರಿ ಸಂಘವು ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿದ...
ಕಳೆದ 8 ತಿಂಗಳಿನಿಂದ ಅಂಗಾರರು 100 ಕೋಟಿ ಅನುದಾನ ತರಿಸಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದಾರೆ. ಇದೆಲ್ಲವನ್ನೂ ನೋಡಿದ ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿ ಶಾಸಕರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರಷ್ಟೆ ಎಂದು ಬಿಜೆಪಿ ಮಂಡಲ ಸಮಿತಿ ಹೇಳಿದೆ. ಸಚಿವರಾದ ಎಸ್.ಅಂಗಾರರ ಸುಳ್ಯ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನಗಳ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನಾಲ್ಕು ದಿನಗಳ ವಾರ್ಷಿಕ ವಿಶೇಷ ಶಿಬಿರವು ಆಗಸ್ಟ್ 23ರಂದು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು. ಸುಳ್ಯದ ಸೇತುವೆಯ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಪ್ರಸ್ತುತ ಕಾಲಮಾನಕ್ಕೆ ಅಗತ್ಯವಿರುವ ಪ್ರಥಮ ಚಿಕಿತ್ಸೆ ವಿಪತ್ತು ನಿರ್ವಹಣಾ ತರಬೇತಿ, ನೈತಿಕ ಮೌಲ್ಯಗಳು...
ಅಡುಗೆ ಕೋಣೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಕಳಂಜ ಗ್ರಾಮದ ಬಾಳೆಗುಡ್ಡೆ ಎಂಬಲ್ಲಿ ನಡೆದಿದೆ.ಕುಸುಮಾ (41) ಮೃತ ದುರ್ದೈವಿ. ಜುಲೈ 20 ರಂದು ಮನೆಯಲ್ಲಿ ಅಡುಗೆ ಮಾಡುತ್ತಿರುವಾಗ ಬೆಂಕಿ ತಗುಲಿ ಕುಸುಮ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ...