ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.24 ರಂದು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಪೈಲಾಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಕೃಷಿ ಅಧಿಕಾರಿ ರಮೇಶ್ ಇವರುಗಳು ಉಪಸ್ಥಿತರಿದ್ದರು.
ಹರಿಹರ ಪಲ್ಲತ್ತಡ್ಕ ಒಕ್ಕೂಟದ ನಿರ್ಗಮಿತ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಎಲ್ಲಪಡ್ಕ, ಐನೆಕಿದು ಒಕ್ಕೂಟದ ನಿರ್ಗಮಿತ ಅಧ್ಯಕ್ಷರಾದ ಮೋನಪ್ಪ ಕುಜುಂಬಾರು, ಹರಿಹರ ಪಲ್ಲತ್ತಡ್ಕ ಒಕ್ಕೂಟದ ನೂತನ ಅಧ್ಯಕ್ಷರಾದ ಹರ್ಷ ಗೌಡ, ಐನೆಕಿದು ಒಕ್ಕೂಟದ ನೂತನ ಅಧ್ಯಕ್ಷರಾದ ಮೀನಾಕ್ಷಿ ಕಲ್ಲೇರಿ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೊದಲಿಗೆ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ನಂತರ ವೈದ್ಯರಾದ ಡಾ.ಚಂದ್ರಶೇಖರ ಕಿರಿಭಾಗ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಸೇವಾಪ್ರತಿನಿಧಿ ರೇಖಾ ಅವರು ಒಕ್ಕೂಟದ ವರದಿ ಮಂಡನೆ ಮಾಡಿದರು.
ನಂತರ ಉದ್ಘಾಟಕರ ಭಾಷಣ, ಅತಿಥಿಗಳ ಭಾಷಣ ಹಾಗೂ ನಿಕಟಪೂರ್ವ ಅಧ್ಯಕ್ಷರುಗಳ ಭಾಷಣ ನೆರವೇರಿತು. ನಂತರ ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ನೂತನ ಒಕ್ಕೂಟಗಳ ಅಧಿಕಾರ ಹಸ್ತಾಂತರ ಪದಗ್ರಹಣ ನಡೆಯಿತು. ನಂತರ ಹರಿಹರ ಪಲ್ಲತ್ತಡ್ಕದಲ್ಲಿ ಸುಮಾರು 09 ವರ್ಷಗಳ ಕಾಲ ಸೇವಾಪ್ರತಿನಿಧಿಯಾಗಿ ಸೇವೆ ಸಲ್ಲಿಸಿ ಬಾಳುಗೋಡಿಗೆ ವರ್ಗಾವಣೆಯಾದ ರೇಖಾ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ನಂತರ ಸೇವಾಪ್ರತಿನಿಧಿಯವರು ಭಾಷಣ ಮಾಡಿದರು. ನಂತರ ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ನಿರ್ಗಮಿತ ಒಕ್ಕೂಟಗಳ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಂತರ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ನಂತರ ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ನೂತನ ಒಕ್ಕೂಟಗಳ ಅಧ್ಯಕ್ಷರುಗಳ ಭಾಷಣ ನಡೆದು, ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕೃಷಿ ಮೇಲ್ವಿಚಾರಕರಾದ ರಮೇಶ್ ಹಾಗೂ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್ ಮಾಹಿತಿ ನೀಡಿದರು.
ಹರಿಹರ ಪಲ್ಲತ್ತಡ್ಕ ಒಕ್ಕೂಟದ ಕಾರ್ಯದರ್ಶಿ ಗಿರೀಶ್ ಹೆರಕಜೆ ಸ್ವಾಗತಿಸಿ ಮಮತಾ ಆಚಾರಿಗದ್ದೆ ಧನ್ಯವಾದ ಸಸಮರ್ಪಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್ ರವರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಐನೆಕಿದು ಹಾಗೂ ಹರಿಹರ ಪಲ್ಲತ್ತಡ್ಕ ನೂತನ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ಗಮಿತ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ