Ad Widget

ಸುಳ್ಯ ತಾಲೂಕು ಕ.ಸಾ.ಪ. ವತಿಯಿಂದ ತೇಜಸ್ವಿ ಕಡಪಳ ಅವರಿಗೆ ಸನ್ಮಾನ

ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನಾ ಇಲಾಖೆ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ತೇಜಸ್ವಿ ಕಡಪಳ ಅವರು ನಿರ್ಮಿಸಿದ್ದ ‘ಖುಷಿಯೋಂಕಾ ಆಶಿಯಾನ’ ಎಂಬ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಜುಲೈ 26ರಂದು ನಡೆದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

. . . . . . . . .


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕ.ಸಾ.ಪ.ದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅವರು ವಹಿಸಿ ಸುಳ್ಯ ಕ.ಸಾ.ಪ.ದಲ್ಲಿ ಎರಡನೇ ಬಾರಿ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ತೇಜಸ್ವಿಯವರು ಸಾಹಿತ್ಯ, ಯಕ್ಷಗಾನ, ಕ್ರೀಡೆ, ಕಿರುಚಿತ್ರ ನಿರ್ಮಾಣ ಮೊದಲಾದ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಯುವ ಪ್ರತಿಭೆ. ಅವರ ಕಾರ್ಯಗಳಿಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಚೊಕ್ಕಾಡಿ ಶಾಲಾ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು, ಭಾವನಾ ಸುಗಮ ಸಂಗೀತ ಬಳಗದ ಅಧ್ಯಕ್ಷರಾದ ಕೆ.ಆರ್.ಗೋಪಾಲಕೃಷ್ಣ, ಆಡಳಿತ ಮಂಡಳಿ ನಿರ್ದೇಶಕರಾದ ಆನಂದ ಚಿಲ್ಪಾರು, ವೆಂಕಟ್ರಮಣ ಇಟ್ಟಿಗುಂಡಿ, ಕಾರ್ಯದರ್ಶಿಯವರಾದ ತೇಜಸ್ವಿ ಕಡಪಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಮಾಡಬಾಕಿಲು, ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಜಯಶ್ರೀ ಎಂ ಅವರು ಕಾರ್ಯಕ್ರಮ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading