Ad Widget

ಐವರ್ನಾಡು : ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ 1837ರ ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಐವರ್ನಾಡು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಐವರ್ನಾಡು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ – 1837ರ ಉಪನ್ಯಾಸ ಮಾಲಿಕೆಯ ಎರಡನೇ ಉಪನ್ಯಾಸ ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡುನಲ್ಲಿ ನಡೆಸಲಾಯಿತು.

. . . . . . . . .

ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಬಾಲಕೃಷ್ಣ ಕೀಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕ ಮತ್ತು ಸಂಘಟಕ ಶ್ರೀ ಗೋಪಾಲ ಪೆರಾಜೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದ್ದಾರೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎಸ್.ಪಿ ಮಹದೇವ, ಪ್ರಾಂಶುಪಾಲ ಶ್ರೀ ಮಹಮ್ಮದ್ ಇಸಾಕ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಶ್ರೀ ಸೂಫಿ ಪೆರಾಜೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಕಿಶನ್ ಜಬಳೆ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ರೇಖಾ.ಯು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

. . . . . . .

ವೇದಿಕೆಯಲ್ಲಿ ನವಚೇತನ ಚಿಣ್ಣರ ಕೂಟದ ಸಂಚಾಲಕ ಶ್ರೀ ಲಕ್ಷ್ಮೀನಾರಾಯಣ ಬೊಳುಬೈಲು ವೇದಿಕೆಯಲ್ಲಿ. ಯುವಕ ಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕ ಶ್ರೀ ನಾರಾಯಣ. ಬಿದಾನ.

ಯುವಕ ಮಂಡಲದ ಜೊತೆ ಕಾರ್ಯದರ್ಶಿ ಪ್ರವೀಣ ಕಾಟೂರು ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪದಾಧಿಕಾರಿಗಳಾದ ಭುವನ್ ಬೊಳುಬೈಲು, ನಿತಿನ್ ಬೊಳುಬೈಲು, ವೆಂಕಟೇಶ್ ನಡುಬೆಟ್ಟು, ಧರ್ಮ ಕಾಯರಡ್ಕ, ಪ್ರದೀಪ್ ಬೊಳುಬೈಲು, ಶಿವಪ್ರಸಾದ್ ಪಿಲಿಕೋಡಿ, ಕಾಲೇಜು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading