ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಜುಲೈ 25 ಮತ್ತು 26 ರಂದು ಮೂಡಬಿದಿರೆಯ ಕನ್ನಡ ಭವನದಲ್ಲಿ ನಡೆದ ಅಂತರ್ ಕಾಲೇಜು ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ರಕ್ಷಾ ಕೆ.ಆರ್.ಗೆ ಮಹಿಳೆಯರ 55 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ವೇಟ್ ಲಿಫ್ಟಿಂಗ್ ರಾಷ್ಟ್ರೀಯ ಚಾಂಪಿಯನ್ ಎ. ರಮೇಶ್ ಅವರಲ್ಲಿ ತರಬೇತಿ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
- Thursday
- April 3rd, 2025