ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3.30ಕ್ಕೆ ಹೊರಟು 4.25 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 6.30ಕ್ಕೆ ಬೆಳ್ಳಾರೆಗೆ ಆಗಮಿಸಿದ ನಂತರ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನಿಸಿ 7.15ಕ್ಕೆ ಮಂಗಳೂರಿಗೆ ಮರಳಿ ರಾತ್ರಿ 9.15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
- Thursday
- November 21st, 2024