75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ಜು.31 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕಿರಿಯ ವಿಭಾಗ, ಹಿರಿಯ ವಿಭಾಗ, ಪ್ರೌಢ ವಿಭಾಗ, ಕಾಲೇಜು ವಿಭಾಗ, ಪುರುಷರ ವಿಭಾಗ, ಮಹಿಳೆಯರ ವಿಭಾಗಕ್ಕೆ ಗ್ರಂಥಾಲಯ ಪಿತಾಮಹ ಡಾ.ರಂಗನಾಥನ್ ರವರ ಚಿತ್ರ ಬಿಡಿಸುವುದು, ಕಿರಿಯ ವಿಭಾಗ, ಹಿರಿಯ ವಿಭಾಗ ಹಾಗೂ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆಯ ದೇಶಭಕ್ತಿ ಗೀತೆ ಹಾಗೂ ಶಾಲಾ ಕಾಲೇಜು ಮಟ್ಟದಲ್ಲಿ ನೀಡಿರುವ ಭಾಷಣದ ವಿಷಯಕ್ಕೆ ಸಂಬಂಧಿಸಿದ ಭಾಷಣ ನಡೆಯಲಿದ್ದು, ಕಾಲೇಜು ವಿಭಾಗ, ಪುರುಷರ ವಿಭಾಗ, ಮಹಿಳೆಯರ ವಿಭಾಗಕ್ಕೆ ವಂದೇಮಾತರಂ ದೇಶಭಕ್ತಿ ಗೀತೆ, ಸ್ವಾತಂತ್ರ್ಯ ಹೋರಾಟಗಾರ/ಹೋರಾಟಗಾರ್ತಿಯರ ಛದ್ಮವೇಷ ಹಾಗೂ ಗ್ರಂಥಾಲಯದ ಸದ್ಬಳಕೆ ಬಗ್ಗೆ ಭಾಷಣ ಕಾರ್ಯಕ್ರಮ ನಡೆಯಲಿದೆ.
ಈ ಸ್ಪರ್ಧೆಯು ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯವರಿಗೆ ಮಾತ್ರ (ನಾಲ್ಕೂರು ಹಾಗೂ ಗುತ್ತಿಗಾರು) ಆಧಾರ್ ಕಾರ್ಡ್ ಪ್ರತಿ ತರಬೇಕು. ಮತ್ತು ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸಿದ್ದಲ್ಲಿ ಪಂಚಾಯತ್ ವ್ಯಾಪ್ತಿಯ ಶಾಲಾ ಗುರುತಿನ ಚೀಟಿ ತರಬೇಕು. ಸ್ಪರ್ಧೆಗೆ ಸಮಯಕ್ಕೆ ಸರಿಯಾಗಿ ಭಾಗವಹಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ :- ಉಲ್ಲಾಸ್ ಕಜ್ಜೋಡಿ