
ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ.ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಕರ್ತವ್ಯದಲ್ಲಿದ್ದ ಪಿಎಸ್ಐ ಯವರಿಗೆ ಸ್ಥಳ ನಿಗದಿಪಡಿಸಿಲ್ಲ. ಬೆಳ್ಳಾರೆಯಲ್ಲಿ ಲಾಠಿಚಾರ್ಜ್ ಮಾಡಿದ ಕಾರಣಕ್ಕೆ ವ್ಯಾಪಕ ಟೀಕೆ ಬಂದ ಹಿನ್ನೆಲೆಯಲ್ಲಿ ಈ ವರ್ಗಾವಣೆ ನಡೆದಿದೆ ಎನ್ನಲಾಗಿದೆ.