Ad Widget

ಕಳಂಜ : ಯುವಕನ ಕೊಲೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಿ : ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಕಳಂಜದಲ್ಲಿ ಗುಂಪು ಹಲ್ಲೆ ನಡೆಸಿ ಯುವಕನನ್ನು ಕೊಲೆ ಮಾಡಿರುವುದರ ಬಗ್ಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕೊಲೆ ತನಿಖೆಗಾಗಿ ಸರಕಾರ ಪ್ರತ್ಯೇಕ ತನಿಖಾ ತಂಡ ರಚಿಸಬೇಕು ಹಾಗೂ ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಸೂಕ್ತ...

ಜು.31: 1837ರ ಅಮರ ಸುಳ್ಯದ ಸ್ವಾತಂತ್ರ್ಯ ಸಮರ ಬಗ್ಗೆ ವಿಚಾರ ಗೋಷ್ಠಿ

ಗೌಡರ ಯುವ ಸೇವಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ 75ನೇ ಸ್ವಾಂತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜರುಗಲಿರುವ 1837ರ ಅಮರ ಸುಳ್ಯದ ಸ್ವಾತಂತ್ರ್ಯ ಸಮರ ಬಗ್ಗೆ ವಿಚಾರ ಗೋಷ್ಠಿ ಜು.22 ರಂದು ಸುಳ್ಯದ ಅಂಬಟೆಡ್ಕದಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕ ಡಾ.ಎನ್.ಎ. ಜ್ಞಾನೇಶ್ ಹೇಳಿದರು. ಅವರು ಪ್ರೆಸ್...
Ad Widget

ಪ್ರತ್ವಿಜ ಬೊಳುಗಲ್ಲು ನಿಧನ

ಮಂಡೆಕೋಲು ಗ್ರಾಮದ ಬೊಳುಗಲ್ಲು ಪ್ರತ್ವಿಜ(24ವ.)ರವರು ಅಸೌಖ್ಯದಿಂದ ಜು.20ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಸುರೇಶ್ ಬೊಳುಗಲ್ಲು, ಪುತ್ರಿ ಒಂದೂವರೆ ವರ್ಷ ಪ್ರಾಯದ ದಿಯಾ, ಮಾವ, ಅತ್ತೆ, ಬಾವ-ಅಕ್ಕ, ಅತ್ತಿಗೆ-ಅಣ್ಣ ಮತ್ತು ಕುಂಟುಬಸ್ಥರನ್ನು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ ಮತ್ತು ಸ್ಕೌಟ್ ಗೈಡ್ ಶಿಕ್ಷಕರ ಮಾಹಿತಿ ಕಾರ್ಯಾಗಾರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ದಿನಾಂಕ 21.07.2022 ಗುರುವಾರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ಇವರ ಅಧ್ಯಕ್ಷತೆಯಲ್ಲಿ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಜಿಲ್ಲಾ ಸ್ಕೌಟ್ ಆಯುಕ್ತರಾದ ರಾಮಶೇಷ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಎಂಜಿ ಕಜೆ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್...

ಹರಿಹರ ಪಲ್ಲತ್ತಡ್ಕ : ರೋಜ್ ಗಾರ್ ದಿವಸ್ ಹಾಗೂ ಸಂಜೀವಿನಿ ಒಕ್ಕೂಟದ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜು.21 ರಂದು ರೋಜ್ ಗಾರ್ ದಿವಸ್ ಹಾಗೂ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ ನಡೆಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಗಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಾವತಿ, ಎನ್.ಆರ್.ಜಿ ಐ.ಇ.ಸಿ ಕೋರ್ಡಿನೇಟರ್...

ಭಾರತದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ – ನಡೆದು ಬಂದ ಹಾದಿ ಇಲ್ಲಿದೆ

ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿ ಆಯ್ಕೆಯಾಗುವವರೆಗೆ ಈಕೆಯನ್ನು ಹೆಚ್ವಿನವರಿಗೆ ಗೊತ್ತಿರಲಿಲ್ಲ. ಪ್ರಚಾರದಲ್ಲಿರದ ವ್ಯಕ್ತಿಯನ್ನು ಎನ್.ಡಿ.ಎ. ಆಯ್ಕೆ ಮಾಡಿದಾಗ ಎಲ್ಲರ ಮನದಲ್ಲಿ ಯಾರು ಈ ದ್ರೌಪದಿ ಮುರ್ಮು ಎಂದು ಹುಬ್ಬೇರಿಸುವಂತೆ ಮಾಡಿತ್ತು. ಈಗ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ. 64 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಬಡತನದಿಂದ ಮೇಲೆದ್ದು ಬಂದವರು, ಬುಡಕಟ್ಟು ಜನಾಂಗದ ಸಾಮಾನ್ಯ ಕುಟುಂಬದ...

ಭಾರತದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಆಯ್ಕೆ – ನಡೆದು ಬಂದ ಹಾದಿ ಇಲ್ಲಿದೆ

ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿ ಆಯ್ಕೆಯಾಗುವವರೆಗೆ ಈಕೆಯನ್ನು ಹೆಚ್ವಿನವರಿಗೆ ಗೊತ್ತಿರಲಿಲ್ಲ. ಪ್ರಚಾರದಲ್ಲಿರದ ವ್ಯಕ್ತಿಯನ್ನು ಎನ್.ಡಿ.ಎ. ಆಯ್ಕೆ ಮಾಡಿದಾಗ ಎಲ್ಲರ ಮನದಲ್ಲಿ ಯಾರು ಈ ದ್ರೌಪದಿ ಮುರ್ಮು ಎಂದು ಹುಬ್ಬೇರಿಸುವಂತೆ ಮಾಡಿತ್ತು. ಈಗ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ. 64 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಬಡತನದಿಂದ ಮೇಲೆದ್ದು ಬಂದವರು, ಬುಡಕಟ್ಟು ಜನಾಂಗದ ಸಾಮಾನ್ಯ ಕುಟುಂಬದ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವಾರ್ಷಿಕ ಮಹಾಸಭೆ ಮತ್ತು ಪುನಶ್ಚೇತನ ಕಾರ್ಯಕ್ರಮ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವಾರ್ಷಿಕ ಮಹಾಸಭೆಯು ದಿನಾಂಕ 20/7/2022 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ನಡೆಯಿತು.ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಮಹದೇವ.ಎಸ್.ಪಿ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಾಲೂಕಿನ ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ತಮ್ಮ ಶಾಲೆಯಲ್ಲಿ ದಳವನ್ನು ತೆರೆದು ಇದನ್ನು...

ಜು.23: ಗುತ್ತಿಗಾರು ಸೊಸೈಟಿಯ ನೂತನ ದೀನ್ ದಯಾಳ್ ರೈತ ಸಭಾಭವನ ಉದ್ಘಾಟನೆ – ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಆಗಮನ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ದೀನ್ ದಯಾಳ್ ರೈತ ಸಭಾಭವನ ಜು. 23 ರಂದು ಉದ್ಘಾಟನೆಗೊಳ್ಳಲಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಭಾಭವನ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಲಿದ್ದಾರೆ. ಗೊಬ್ಬರ ದಾಸ್ತಾನು ಮಳಿಗೆ ಉದ್ಘಾಟನೆಯನ್ನು ದ. ಕ...

ಬೆಳ್ಳಾರೆ : ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – 8 ಮಂದಿ ಬಂಧನ

ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....
Loading posts...

All posts loaded

No more posts

error: Content is protected !!