- Thursday
- November 21st, 2024
ಕಲಬುರಗಿ ರಂಗ ಸಂಗಮ ಕಲಾವೇದಿಕೆಯು ಕಳೆದ 9 ವರ್ಷಗಳಿಂದ ನೀsಡುತ್ತಾ ಬಂದಿರುವ ಎಸ್.ಬಿ.ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗ ಪ್ರಶಸ್ತಿಗೆ ಹಿರಿಯ ರಂಗಕರ್ಮಿ, ರಂಗಮಾಂತ್ರಿಕ ಜೀವನರಾಂ ಸುಳ್ಯರನ್ನು ಆಯ್ಕೆಯಾಗಿದ್ದಾರೆ.ಪ್ರಶಸ್ತಿ ಆಯ್ಕೆಗಾಗಿ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಎಲ್.ಬಿ.ಶೇಖ್ ಮಾಸ್ತರ್ ಅಧ್ಯಕ್ಷತೆಯಲ್ಲಿ, ಹಿರಿಯ ರಂಗಕರ್ಮಿ ಎಚ್.ಎಸ್. ಬಸವಪ್ರಭು, ಶಾಂತಾ ಕುಲಕರ್ಣಿ, ಸಾಹಿತಿ ಬಿ.ಎಚ್.ನಿರಗುಡಿ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್,...
ರಾಜಸ್ಥಾನದ ಉದಯಪುರ ಎಂಬಲ್ಲಿ ನಡೆದ ಟೈಲರ್ ಕನ್ನಯ್ಯ ಲಾಲ್ ರವರ ಭೀಕರ ಹತ್ಯೆಯನ್ನು ಖಂಡಿಸಿ ಸುಳ್ಯ ವಿಶ್ವ ಹಿಂದೂ ಪರಿಷದ್, ಬಜರಂಗದಳ ಪ್ರಖಂಡದ ವತಿಯಿಂದ ಪ್ರತಿಭಟನಾ ಸಭೆಯು ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಜೂ.30 ರಂದು ನಡೆಯಿತು. ಬಳಿಕ ಸೇರಿದ ಸಂಘಟನೆಯ ಕಾರ್ಯಕರ್ತರು ತಹಶಿಲ್ದಾರರ ಮುಖಾಂತರ ಹತ್ಯೆಗೈದ ಕೊಲೆಗಡುಕರಿಗೆ ತಕ್ಕ ಶಿಕ್ಷೆ ವಿಧಿಸುವಂತೆ ರಾಷ್ಟ್ರಪತಿಯವರಿಗೆ ಮನವಿಯನ್ನು...
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ನಿನ್ನೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ , ದೇವರ ದರ್ಶನ ಪಡೆದು, ಸರ್ಪ ಸಂಸ್ಕಾರ ಪೂಜೆ ನೆರವೇರಿಸಿ ಇಂದು ಸುಳ್ಯ ಮಾರ್ಗವಾಗಿ ಮಡಿಕೇರಿಗೆ ತೆರಳಿದರು. ಸುಳ್ಯ ನಗರದಲ್ಲಿ ಸುಳ್ಯ ಪೋಲೀಸರು ಬಂದೋಬಸ್ತ್ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ೫ನೇ ಬಾರಿ ಕಂಪನದ ಅನುಭವ ಉಂಟಾಗಿದೆ. ಚೆಂಬು, ಗೂನಡ್ಕ ಹಾಗೂ ಉಬರಡ್ಕದಲ್ಲಿ 10.45 ಕ್ಕೆ ಕಂಪಿಸಿದೆ ಎಂದು ತಿಳಿದು ಬಂದಿದೆ. ಜನರು ಕಂಪನಕ್ಕೆ ಹೆದರಿ ಮನೆಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಲಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯದ ವತಿಯಿಂದ ಜೂ.28 ರಂದು ಕಲ್ಮಕಾರು ಪದ್ನಡ್ಕದ ಕಮಲ ಎಂಬುವವರ ಮನೆಯ ಮಾಡಿನ ದುರಸ್ತಿ ಕಾರ್ಯ ಮಾಡಲಾಯಿತು. ಜೂ.28 ರಿಂದ ಜೂ.30 ರವರೆಗೆ ದುರಸ್ತಿ ಕಾರ್ಯ ನಡೆಸಲಾಯಿತು. ಜೂ.30 ರಂದು ಮನೆಯ ಸ್ವಚ್ಚತೆ ಮಾಡಿ ಮನೆಯವರಿಗೆ ಬಿಟ್ಟು ಕೊಡಲಾಯಿತು.ಈ ಮಾಡಿನ...
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯದಿಂದ ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಪ್ರಯಾಣಿಸಲಿದ್ದು, ಸುಳ್ಯ ನಗರ ಸೇರಿದಂತೆ ಸುಬ್ರಹ್ಮಣ್ಯ-ಸುಳ್ಯ- ಮಡಿಕೇರಿ ಮಾರ್ಗದಲ್ಲಿ ವಾಹನ ಚಾಲಕರು ಅಡ್ಡಾದಿಡ್ಡಿಯಾಗಿ ವಾಹನ ಪಾರ್ಕಿಂಗ್ ಮಾಡದಂತೆ, ವಾಹನ ಚಲಾಯಿಸದಂತೆ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ.
ಸುಳ್ಯ : ನಾಲ್ಕನೇ ಬಾರಿಗೆ ಸುಳ್ಯದ ವಿವಿಧೆಡೆ ಭೂಕಂಪದ ಅನುಭವವಾಗಿದೆ. ರಾತ್ರಿ ಗಂಟೆ ಸರಿಸುಮಾರು 1-15 ಕ್ಕೆ ಕಂಪಿಸಿದ ಅನುಭವವಾಗಿದೆ. ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ದೊಡ್ಡ ಶಬ್ದದ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಬಾರಿ...