
ಹರಿಹರ ಪಲ್ಲತ್ತಡ್ಕದಲ್ಲಿ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಘಟನಾ ಸ್ಥಳಗಳಿಗೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಆ.03 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹರಿಹರ ಪಲ್ಲತ್ತಡ್ಕ ಗ್ರಾಮದ ಹರಿಹರ ಪೇಟೆಯಲ್ಲಿ ಭಾರೀ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ಸ್ಥಳ ಹಾಗೂ ಅಂಗಡಿಗಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ.ಕೆ.ವಿ, ಪುತ್ತೂರು ಎ.ಸಿ ಗಿರೀಶ್ ನಂದನ್, ಜಿಲ್ಲಾ ಪಂಚಾಯತ್ ಸಿ.ಇ.ಓ ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾಲಕ್ಷ್ಮಿ , ಕಡಬ ತಾಲೂಕು ತಹಶೀಲ್ದಾರ್ ಅನಂತ ಶಂಕರ್, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಎ.ಸಿ.ಎಫ್ ಪ್ರವೀಣ್ ಶೆಟ್ಟಿ, ಆರ್.ಐ ಶಂಕರ್, ಜಗದೀಶ್ ಶೇಣವ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ವಿನಯ ಮುಳುಗಾಡು, ಎ.ವಿ ತೀರ್ಥರಾಮ, ಗ್ರಾಮ ಲೆಕ್ಕಾಧಿಕಾರಿ ಮಧು.ಕೆ.ಬಿ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹಿಮ್ಮತ್.ಕೆ.ಸಿ, ಸ್ಥಳೀಯರಾದ ರೇಗನ್ ಶೆಟ್ಟಿಯಡ್ಕ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ