Ad Widget

ಮರ ಕೊಯ್ಯುವ ಮಿಷನ್ ತಾಗಿ ಶಸ್ತ್ರಚಿಕಿತ್ಸೆ ಒಳಗಾದ ಕುಶಾಲಪ್ಪ ಜಾಲುಮನೆ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರು

. . . . .

ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರೀ ಮಳೆಗೆ ಹಾನಿ ಸಂಭವಿಸಿದ್ದು, ವಿವಿಧ ಸಂಘ ಸಂಸ್ಥೆಗಳ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರುಗಳು ಶ್ರಮಸೇವೆಯಲ್ಲಿ ನಿರತರಾಗಿದ್ದಾರೆ. ಶ್ರಮಸೇವೆಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕುಶಾಲಪ್ಪ ಜಾಲುಮನೆ ಅವರ ಕಾಲಿಗೆ ಮರ ಕೊಯ್ಯುವ ಮಿಷನ್ ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದು ಮನೆಯಲ್ಲಿದ್ದು, ಆ.06 ರಂದು ಕುಶಾಲಪ್ಪ ಜಾಲುಮನೆ ಅವರನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!