- Friday
- November 1st, 2024
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರದಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಶಶಿಕಲಾರವರು ಮುಖ್ಯ ಶಿಕ್ಷಕಿಯಾಗಿ ಭಡ್ತಿ ಪಡೆದು ಅಲೆಕ್ಕಾಡಿ ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 10ರಂದು ಮುರುಳ್ಯ ಶಾಂತಿನಗರ ಶಾಲೆಯಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಿನೇಶ್ ನಡುಬೈಲು ವಹಿಸಿದ್ದರು. ಸನ್ಮಾನ ಕಾರ್ಯಕ್ರಮವನ್ನು...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳಾದ ಶಿಯಾಬ್,ರಿಯಾಜ್ ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದರು.ಪ್ರವೀಣ್ ನಡೆಸುತ್ತಿದ್ದ ಮಾಸ್ತಿಕಟ್ಟೆಯಲ್ಲಿರುವ ಅಕ್ಷಯ ಚಿಕನ್ ಸೆಂಟರ್ ಮುಂದೆಯೇ ಕೊಲೆ ನಡೆದಿತ್ತು. ಇದೀಗ ಕೊಲೆ ನಡೆಸಿದ ಕುರಿತು ಆರೋಪಿಗಳ ಸ್ಥಳ ಮಹಜರು ಡಿವೈಎಸ್ಪಿ ಗಾನ.ಪಿ ಕುಮಾರ್ ನೇತೃತ್ವದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ...
ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಲ್ಮಕಾರು ಭಾಗದಲ್ಲಿ ಜಲ ಸ್ಫೋಟಗೊಂಡು ನದಿ ಉಕ್ಕಿ ಹರಿದು ಹಾನಿಯಾದ ಪ್ರದೇಶಗಳಿಗೆ ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಕಾಂಗ್ರೆಸ್ಸಿನ ನಾಯಕರುಗಳು ಭೇಟಿ ನೀಡಿದರು. ಹರಿಹರ ಪಲ್ಲತಡ್ಕ ಉದ್ಯಮಿ ರಾಮಕೃಷ್ಣ ಗೌಡ ಕುದ್ಕುಳಿ ರವರ ಮಿರಮಿಸು ಸಂಕೀರ್ಣದಲ್ಲಿ ಸಭೆ ನಡೆಸಿದರು. ಸಂಪೂರ್ಣವಾಗಿ ಕೊಚ್ಚಿ ಹೋಗಿರುವ ಅಂಗಡಿ ಮಾಲಕರಿಗೆ ತಲಾ ಹತ್ತು...
ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ಶೀಂಟೂರು ಸ್ಮೃತಿ ಆ.13ರಂದು ನಡೆಯಲಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ಶ್ರೀಮತಿ ಶಾರದಾ ಎ.ಜೆ. ಶೆಟ್ಟಿ, ದೀಪ ಪ್ರಜ್ವಲಿಸಲಿದ್ದಾರೆ. ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಸನ್ಮಾನಿತರನ್ನು ಸನ್ಮಾನಿಸಲಿದ್ದಾರೆ. ನಿವೃತ್ತ...
ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸಿ ಜೀವನ ಸಾಗಿಸುತ್ತಿರುವ ಯೋಗೀಶ್ ಹಾಗೂ ಲಲಿತಾ (ರೇಷ್ಮಾ) ದಂಪತಿಗಳ ಪುತ್ರಿ ಖುಷಿ ಬ್ರೈನ್ ಟ್ಯೂಮರ್ ಕಾಯಿಲೆಯಿಂದಬಳಲುತ್ತಿದ್ದಳು. ಬಾಲಕಿಗೆ ಶೀಘ್ರ ಮೆದುಳಿನ ಶಸ್ತ್ರ ಚಿಕಿತ್ಸೆಗೆ ಸುಮಾರು ಏಳು ಲಕ್ಷ ರೂಪಾಯಿ ತಗುಲಲಿದ್ದು ಮನೆಯವರು ಆರ್ಥಕ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ದಾನಿಗಳ ನೆರವು ಯಾಚಿಸಿದ್ದರು. ಇದಕ್ಕೆ ಸ್ಪಂದಿಸಿದ ವಾಹನ ಚಾಲಕ ಮಾಲಕರ ಸಂಘದ ವತಿಯಿಂದ...
ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸಿ ಜೀವನ ಸಾಗಿಸುತ್ತಿರುವ ಯೋಗೀಶ್ ಹಾಗೂ ಲಲಿತಾ (ರೇಷ್ಮಾ) ದಂಪತಿಗಳ ಪುತ್ರಿ ಖುಷಿ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದಳು. ಬಾಲಕಿಗೆ ಶೀಘ್ರ ಮೆದುಳಿನ ಶಸ್ತ್ರ ಚಿಕಿತ್ಸೆಗೆ ಸುಮಾರು ಏಳು ಲಕ್ಷ ರೂಪಾಯಿ ತಗುಲಲಿದ್ದು ಮನೆಯವರು ಆರ್ಥಕ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ದಾನಿಗಳ ನೆರವು ಯಾಚಿಸಿದ್ದರು. ಇದಕ್ಕೆ ಸ್ಪಂದಿಸಿದ ಬೆಂಗಳೂರಿನ ಉದ್ಯಮಿ ಆನಂದ ಕಲ್ಲುಗದ್ದೆ...
ಅಮರಪಡ್ನೂರು: ಹರ್ ಘರ್ ತಿರಂಗಾ ಅಭಿಯಾನಕ್ಕೆ ಶೇಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ ಮೇಲ್ನೋಟ ಅವರು ರಾಷ್ಟ್ರಧ್ವಜ ಅಭಿಯಾನಕ್ಕೆ ಚಾಲನೆ ನೀಡಿದರು.ನಂತರ ಶಾಲಾಮಕ್ಕಳ ಪೋಷಕರಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಚೂಂತಾರವರು ರಾಷ್ಟ್ರಧ್ವಜದ ಮಹತ್ವ, ಬಳಕೆ ಮತ್ತು ಸರ್ಕಾರದ ಸುತ್ತೋಲೆಯ ಮಾಹಿತಿ ನೀಡಿದರು....
ಇತ್ತೀಚೆಗೆ ಸುರಿದ ಬಾರಿ ಮಳೆಗೆ ಕಲ್ಮಕಾರು ಮೋಹನ್ ಬಾಳೆ ಬೈಲು ಎಂಬವರ ಮನೆಯ ಹಿಂಬದಿ ಗುಡ್ಡ ಕುಸಿತ ಉಂಟಾಗಿತ್ತು. ಅದನ್ನು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ವತಿಯಿಂದ ಆ.10 ರಂದು ಶ್ರಮ ಸೇವೆ ಮೂಲಕ ಮಣ್ಣನ್ನು ತೆರವುಗೊಳಿಸಲಾಯಿತು. ಈ ಶ್ರಮದಾನದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ 32 ಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದು...
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಮಾಡಿದ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್ ಅಂಕತ್ತಡ್ಕ, ಬಶೀರ್ ಎಲಿಮಲೆ ಎಂದು ಗುರುತಿಸಲಾಗಿದ್ದು ಬಂಧಿತರೆಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದಾರೆ. ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 10 ಮಂದಿಯ ಬಂಧನವಾಗಿದೆ. https://youtu.be/A1VhDpymcyE ಬಂಧಿತ ಶಿಯಾಬುದ್ದೀನ್ ಕೊಕ್ಕೋ ಪ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬಶೀರ್ ಮತ್ತು ರಿಯಾಜ್ ಹೊಟೇಲ್...
Loading posts...
All posts loaded
No more posts