ಮೊನ್ನೆ ಸುರಿದ ಭಾರಿ ಮಳೆಗೆ ಹಲವೆಡೆ ಹಾನಿ ಸಂಭವಿಸಿದ್ದು, ಆ.11 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಲ್.ಎಚ್ ಮಂಜುನಾಥ್ ಅವರು ಸಭೆ ನಡೆಸಿ ಸೇತುವೆ ಹಾನಿ ಹಾಗೂ ಕೃಷಿ ಹಾನಿಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಜನಜಾಗೃತಿ ವೇದಿಕೆಯ ಸದಸ್ಯರಾದ ಮಾಧವ ಚಾಂತಾಳ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸ್ಥಳೀಯರಾದ ರೇಗನ್ ಶೆಟ್ಟಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್.ಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರುಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ನವಜೀವನ ಸಮಿತಿಯ ಸದಸ್ಯರುಗಳು ಹಾಗೂ ಸುಬ್ರಹ್ಮಣ್ಯ ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ