ನಿಸರ್ಗ ಯುವಕ ಮಂಡಲ ಐನೆಕಿದು ಇದರ ಆಶ್ರಯದಲ್ಲಿ ಆ.21 ರಂದು ಐನೆಕಿದು ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ ಮತ್ತು ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.14 ರಂದು ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಪೈಲಾಜೆ ಅವರುಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಆ.21 ರಂದು ನಡೆಯಲಿರುವ ಮೊಸರು ಕುಡಿಕೆ ಮತ್ತು ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಾದ ರಾಘವೇಂದ್ರ ಅವರು ಉದ್ಘಾಟಿಸಲಿದ್ದು, ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಕಲ್ಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಹಾಗೂ ಸದಸ್ಯರಾದ ಶ್ರೀಮತಿ ಭಾರತಿ ಮೂಕಮಲೆ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಇರಲಿದ್ದಾರೆ. ಮದ್ಯಾಹ್ನ 12:00 ಗಂಟೆಗೆ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಹಿಂ.ಜಾ.ವೇ ದಕ್ಷಿಣ ಪ್ರಾಂತ ಮಾತೃ ಸುರಕ್ಷಾ ಸಂಯೋಜಕರಾದ ಬ ಗಣರಾಜ್ ಭಟ್ ಕೆದಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕದಲ್ಲಿ 12 ವರ್ಷಗಳಿಂದ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸಿ ಜೆ.ಇ ಆಗಿ ಭಡ್ತಿ ಹೊಂದಿ ಕಡಬ ಸೇವಾ ಕೇಂದ್ರಕ್ಕೆ ನಿಯುಕ್ತಿಗೊಂಡಿರುವ ವಸಂತ ಕುಮಾರ್.ಟಿ.ಎಂ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 5:30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಕಲ್ಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹರಿಹರ ಪಲ್ಲತ್ತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಬಹುಮಾನ ವಿತರಣೆ ನಡೆಸಲಿದ್ದಾರೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಪೈಲಾಜೆ ಅವರು ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಇರಲಿದ್ದಾರೆ. ಬೆಳಿಗ್ಗೆ 8:00 ಗಂಟೆಯಿಂದ 9:00 ಗಂಟೆಯವರೆಗೆ ಕುಕ್ಕೇಶ್ರೀ ಭಜನಾ ತಂಡ ಸುಬ್ರಹ್ಮಣ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 4:30 ರಿಂದ 5:30 ರವರೆಗೆ ಕುಕ್ಕೇಶ್ರೀ ಮಕ್ಕಳ ಕುಣಿತ ಭಜನಾ ತಂಡ ಸುಬ್ರಹ್ಮಣ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ವರದಿ :- ಉಲ್ಲಾಸ್ ಕಜ್ಜೋಡಿ