ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯು ಆ.15 ರಂದು ನಡೆಯಿತು. ಬೆಳಗ್ಗೆ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ವಿ.ಸುಬ್ರಾಯ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ತಿಳಿಸಿದರು. ಇವುಗಳನ್ನು ತಿಳಿದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಶಾಲೆಯ ಸಂಚಾಲಕ ಶ್ರೀ ರಾಧಾಕೃಷ್ಣ ಬೊಳ್ಳೂರು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು ವಿದ್ಯಾರ್ಥಿಗಳು ರಾಷ್ಟ್ರಪ್ರೇಮವನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ಅಣ್ಣಾಜಿ ಗೌಡ, ಕಾರ್ಯದರ್ಶಿಯಾದ ತೇಜಸ್ವಿ ಕಡಪಳ, ಕೋಶಾಧಿಕಾರಿ ಹರ್ಷವರ್ಧನ ಬೊಳ್ಳೂರು, ಚೊಕ್ಕಾಡಿ ಪ್ರೌಢಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣಪ್ರಸಾದ್ ಮಾಡಬಾಕಿಲು, ಫ್ರೆಂಡ್ಸ್ ಕ್ಲಬ್ ಪೈಲಾರು ಕಾರ್ಯದರ್ಶಿ ಸಾತ್ವಿಕ್ ಮಡಪ್ಪಾಡಿ ವೇದಿಕೆಯುಲ್ಲಿ ಉಪಸ್ಥಿತರಿದ್ದರು. ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿ, ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಚೈತ್ರಾ ಯು ವಂದಿಸಿದರು. ರತ್ನಾಕುಮಾರಿ ಮತ್ತು ಚಿತ್ರಕಲಾ ಕಾರ್ಯಕ್ರಮವನ್ನು ನಿರೂಪಿಸಿದರು.
ಸಭೆಯಲ್ಲಿ ಮಾತೃ ಸಂಸ್ಥೆಯ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಫ್ರೆಂಡ್ಸ್ ಕ್ಲಬ್ ಪೈಲಾರಿನ ಸದಸ್ಯರು, ವಿದ್ಯಾಸಂಸ್ಥೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಬೆಳಿಗ್ಗೆ ಶಾಲೆಯಿಂದ ಕೆಳಗಿನ ಪೇಟೆಯ ತನಕ ಘೋಷಣೆಗಳೊಂದಿಗೆ ಪಥಸಂಚಲನ ಮಾಡಲಾಯಿತು.