ಹರಿಹರ ಪಲ್ಲತ್ತಡ್ಕ ಪ್ರೌಢ ಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ನಂತರ ಸಭಾ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳಾದ ಮೇಘಶ್ರೀ, ನಿಶ್ಮಿತಾ ಪ್ರಾರ್ಥನೆ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲವ ಮಲ್ಲಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೇಗನ್ ಶೆಟ್ಟಿಯಡ್ಕ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಉಪಸ್ಥಿತರಿದ್ದರು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ಕೃಪಾ.ಪಿ.ಎಸ್, ದೈಹಿಕ ಶಿಕ್ಷಕರಾದ ಮೇದಪ್ಪ, ಸಹ ಶಿಕ್ಷಕರಾದ ವೆಂಕಟೇಶ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರಾದ ಮೇದಪ್ಪ ಇವರು ಸ್ವಾಗತ ಭಾಷಣ ನೆರವೇರಿಸಿದರು. ಶಿವಾಜಿ.ಎನ್.ಎಸ್ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಲಿಖಿತಾ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಕಿರಿಭಾಗ, ರಾಮಕೃಷ್ಣ ಹೋಟೆಲ್, ಲವ ಮಲ್ಲಾರ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಿಹಿತಿಂಡಿ ವಿತರಣೆ ನಡೆಯಿತು. ರೇಗನ್ ಶೆಟ್ಟಿಯಡ್ಕ ಇವರ ವತಿಯಿಂದ ಲಘು ಪಾನೀಯ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ವನಿತಾ.ಜಿ, ವೀಣಾ.ಕೆ, ಜಯಶ್ರೀ, ಸೌಮ್ಯ.ಕೆ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ