ಕೊಡಿಯಾಲಬೈಲು ಎಂ. ಜಿ.ಎಂ.ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂದು 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಚಂದ್ರ ಕೋಲ್ಚಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಅಡ್ಡಂತಡ್ಕ ದೇರಣ್ಣ ಗೌಡ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ದೊಡ್ಡಣ್ಣ ಗೌಡ ಬರೆಮೇಲು, ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್ ನ ಸ್ಥಾಪಕಾದ್ಯಕ್ಷ ನಿತ್ಯಾನಂದ ಮುಂಡೋಡಿ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬೆಳ್ಯಪ್ಪ ಗೌಡ, ಶಾಲಾ ಮುಖ್ಯ ಶಿಕ್ಷಕಿ ಶೃತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಸೇನಾಧಿಕಾರಿ ದೇರಣ್ಣ ಗೌಡರನ್ನು ಸನ್ಮಾನಿಸಲಾಯಿತು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
- Wednesday
- December 4th, 2024