ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್ ಸುಬ್ರಮಣ್ಯ ಇವರು ನೋಟು ಪುಸ್ತಕ ವಿತರಿಸಿದರು.
ಈ ಸಂದರ್ಭದಲ್ಲಿ ಅಮೃತ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಲಾ ದತ್ತಿ ನಿಧಿಯ ಬಡ್ಡಿಯ ಹಣವನ್ನು ಹಂಚಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರಮೀಳಾ ಎರ್ದಡ್ಕ, ಸದಸ್ಯರಾದ ವಿಜಯ ಕುಮಾರ್ ಚಾರ್ಮಾತ, ಶ್ರೀಮತಿ ಲೀಲಾವತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ, ಶ್ರೀ ಧರ್ಮಸ್ಥಳ ಯೋಜನೆಯ ಒಕ್ಕೂಟದ ಅಧ್ಯಕ್ಷ ಶಾಂತಪ್ಪ ಉತ್ರಂಬೆ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಸುಬ್ರಹ್ಮಣ್ಯ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಚಂದ್ರಶೇಖರ ಬಾಳುಗೋಡು, ಎಸ್ ಡಿ ಎಂ ಸಿ ಅಧ್ಯಕ್ಷರಾದ ಉಮೇಶ್ವರಿ ಮಾತನಾಡಿದರು.
ಈ ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿಯರಾದ ಶ್ರೀಮತಿ ಮೋಕ್ಷ ಹಾಗೂ ಕು.ಸುಧಾರಾಣಿ ನಡೆಸಿಕೊಟ್ಟರು. ಶಾಲಾ ದತ್ತಿನಿಧಿ ನಿರ್ವಹಣೆಯನ್ನು ಶಿಕ್ಷಕರಾದ ಕುಶಾಲಪ್ಪ ತುಂಬತ್ತಾಜೆ ನಡೆಸಿಕೊಟ್ಟರು. ಅದ್ದೂರಿಯಾದ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಈ ಮೆರವಣಿಗೆಯಲ್ಲಿ ಊರ ವಿದ್ಯಾ ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಯ ಸದಸ್ಯರುಗಳು, ಶಾಲೆಯ ವಿದ್ಯಾರ್ಥಿಗಳು, ಅಂಗನವಾಡಿ ಪುಟಾಣಿಗಳು, ಪೋಷಕ ಬಂಧುಗಳು ಶಾಲಾ ಶಿಕ್ಷಕ ವೃಂದ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈ ಯಶಸ್ವಿ ಕಾರ್ಯಕ್ರಮದ ಕೊನೆಗೆ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪ್ಪಾ ಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ವರಿಗೂ ವಂದನೆಗಳನ್ನು ಸಲ್ಲಿಸಿದರು. ಈ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಗುತ್ತಿಗಾರು ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.