ಅಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಉಡುಪಿ ಜಿಲ್ಲೆ ವತಿಯಿಂದ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ , ಅಜ್ಜರಕಾಡು, ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ವಿಜೇತ ಗುರುರಾಜ್ ಪೂಜಾರಿಯವರನ್ನು ಜಿಲ್ಲಾಡಳಿತ ವತಿಯಿಂದ ಸಚಿವರ ಗೌರವಿಸಿದರು.ಉಡುಪಿ ಜಿಲ್ಲೆಯ ಉತ್ಸಾಹಿ ಯುವಕರಿಗೆ ಅಗ್ನಿಪಥ ಯೋಜನೆಗೆ ಸೇರ್ಪಡೆಗೊಳ್ಳಲು ಆಯೋಜಿಸಿರುವ ತರಬೇತಿ ಶಿಬಿರಕ್ಕೆ ಸಚಿವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಇಂಡಸ್ಟ್ರೀಸ್ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಸಿ.ಇ.ಓ. ಹೆಚ್.ಪ್ರಸನ್ನ, ಅಪರ ಜಿಲ್ಲಾಧಿಕಾರಿ ವೀಣಾ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಸಚಿವರು ಉಡುಪಿ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ವಂದನೆ ಸಲ್ಲಿಸಿದರು.