Ad Widget

ಸುಳ್ಯ: ಬಾಲ ವಿಕಾಸ ಸಮಿತಿ ವತಿಯಿಂದ ಅಭಿಯೋಜಕ ಜನಾರ್ದನ್ ಅವರಿಗೆ ಸನ್ಮಾನ

ಬೂಡು ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ವತಿಯಿಂದ ಸುಳ್ಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಅವರಿಗೆ ಗೌರವಾರ್ಪಣೆ. ಬೂಡು ಅಂಗನವಾಡಿ ಕೇಂದ್ರದಲ್ಲಿ ನಡೆದ ಸ್ವಾತಂತ್ರ್ಯ ಅಮೃತ್ ಮಹೋತ್ಸವ ದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸುಳ್ಯ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಅವರಿಗೆ ಗೌರವಾರ್ಪಣೆ ನಡೆಯಿತು.

. . . . . . . . .

ಹಲವಾರು ಪ್ರಕರಣಗಳಲ್ಲಿ ಸರಕಾರದ ಪರವಾಗಿ ಸಮರ್ಥ ವಾದ ಮಂಡಿಸಿ ಆರೋಪಿಗಳಿಗೆ ಜೈಲು ಶಿಕ್ಷೆ ಕೊಡಿಸುವಲ್ಲಿ ಪರಿಶ್ರಮ ವಹಿಸಿರುವ ಕಾರಣ ಜಿಲ್ಲಾ ಪೊಲೀಸ್ ಇಲಾಖೆಯ ಪ್ರಶಂಸೆಗೆ ಪಾತ್ರವಾಗಿದ್ದರು.ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

. . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಗವತೀ ಯುವ ಸೇವಾ ಸಂಘದ ಅಧ್ಯಕ್ಷರಾದ ಗೋಪಾಲ ಎಸ್ ನಡುಬೈಲು ಸನ್ಮಾನಿಸಿದರು.ವೇದಿಕೆಯಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯ, ಭಗವತೀ ಯುವ ಸೇವಾ ಸಂಘದ ಗೌರವ ಅಧ್ಯಕ್ಷರಾದ ರಾಧಾಕೃಷ್ಣ ರೈ ಬೂಡು, ಎಸ್ ಬಿಐ ನ ನಿವೃತ್ತ ಮೆನೇಜರ್ ಜನಾರ್ದನ್ ನಾಯಕ್, ನ್ಯಾಯವಾದಿ ಭಾಸ್ಕರ್ ರಾವ್, ಬಾಲವಿಕಾಸ ಸಮಿತಿ ಸದಸ್ಯ ಸಂಜೀವ ಆಚಾರಿ,ಯುವಮೋರ್ಚಾ ಕಾರ್ಯದರ್ಶಿ ಸುನಿಲ್ ಕೇರ್ಪಳ, ಭಗವತೀ ಯುವ ಸೇವಾ ಸಂಘದ ಸದಸ್ಯರಾದ ವಿಠಲ್ ರೈ,ಪ್ರದೀಪ್ ರೈ, ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯರಾದ ಲತಾ ರೈ ಬೂಡು, ಅರಂತೋಡು ಸಹಕಾರಿ ಬೇಂಕ್ ನ ಮೆನೇಜರ್ ವಾಸುದೇವ ನಾಯಕ್, ಅಶೋಕ್ ಅಡ್ಕಾರ್,ಅಂಗನವಾಡಿ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಬೂಡು ರಾಧಾಕೃಷ್ಣ ರೈ ಸ್ವಾಗತಿಸಿ, ವಾಸುದೇವ ನಾಯಕ್ ಕಾರ್ಯಕ್ರಮ ನಿರೂಪಿಸಿ ಅಂಗನವಾಡಿ ಕಾರ್ಯಕರ್ತೆ ಕವಿತಾ ವಂದಿಸಿದರು


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading