
ಆ.29ರಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನಾಚರಣೆ ನಡೆಯಲಿದೆ. ಇದರ ಅಂಗವಾಗಿ ಆ.16 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು.ಈ ಸಂದರ್ಭದಲ್ಲಿ ಸುಳ್ಯದ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ಕಾರ್ಯಕ್ರಮದ ಮಾಹಿತಿಯನ್ನು ತಿಳಿಸಿದರು. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ 9 ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಆ.29 ರಂದು ಅಪರಾಹ್ನ 1.00 ಗಂಟೆಯಿಂದ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ ಮಾಡಲಿದ್ದಾರೆ.ಧಾರ್ಮಿಕ ಕಾರ್ಯಕ್ರಮ ಸಂಜೆ 6 ಗಂಟೆಗೆ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ವಹಿಸಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ಬಾಲ ವಾಗ್ಮಿ ಬೆಂಗಳೂರು ಹಾರಿಕಾ ಮಂಜುನಾಥ ಮಾಡಲಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಅಮೈ ಮಹಾಲಿಂಗ ನಾಯ್ಕ ರವರನ್ನು ಸನ್ಮಾನಿಸಲಾಗುವುದು.ಗೌರವ ಉಪಸ್ಥಿತರಾಗಿ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ದಕ್ಷಿಣ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್, ಸುಳ್ಯದ ಐಡಿಯಲ್ ಅಟೋ ವರ್ಕ್ಸ್ ಮ್ಹಾಲಕರು ಭಾಸ್ಕರ ಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಲ್ಲದೇ ಮೊಸರು ಕುಡಿಕೆ ವಿಜೇತರಿಗೆ ಪ್ರಥಮ ಸ್ಥಾನ 10001ರೂ ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 7001ಹಾಗೂ ಶಾಶ್ವತ ಫಲಕ, ತೃತೀಯ ಬಹುಮಾನ 4001 ಶಾಶ್ವತ ಫಲಕ ಹಾಗೂ ಭಾಗವಹಿಸಿದವರಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದರು.ವೇದಿಕೆಯಲ್ಲಿ ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ಪಿ ರಂಜಿತ್ ಕುಮಾರ್ , ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ್ ಪೈಕ ಉಪಸ್ಥಿತರಿದ್ದರು.