Ad Widget

ಅರಂತೋಡು :ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯದ ವತಿಯಿಂದ ಫ್ರೀಡಂ ಸ್ಕ್ವೇರ್

ವರ್ಷಂಪ್ರತಿ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಎಸ್.ಕೆ.ಎಸ್.ಎಸ್.ಎಫ್ ಆಯೋಜಿಸುವ ಫ್ರೀಡಂ ಸ್ಕ್ವೇರ್ ಕಾರ್ಯಕ್ರಮ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ವಲಯಾಧ್ಯಕ್ಷರಾದ ಅಬ್ದುಲ್ಲ ಫೈಝಿ ಪೈಂಬಚ್ಚಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅರಂತೋಡು ಖತೀಬ್ ಬಹು ಇಸ್ಹಾಕ್ ಬಾಖವಿ ದುವಾ ನೇತೃತ್ವ ವಹಿಸಿದರು. ಎನ್.ಪಿ.ಎಂ ಸಯ್ಯಿದ್ ಜಲಾಲುದ್ದೀನ್ ತಂಙಳ್ ಕುನ್ನುಂಗೈ ಉದ್ಘಾಟಿಸಿದರು.

. . . . . . . . .

ಮುಖ್ಯ ಪ್ರಭಾಷಣ ಎಸ್.ಕೆ.ಎಸ್.ಎಸ್.ಎಫ್ ದ.ಕ ಜಿಲ್ಲಾ ಒರ್ಗಾನೆಟ್ ಚೇರ್ಮನ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ನಡೆಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ, ಅರಂತೋಡು ಪಿ.ಡಿ.ಒ ಜಯಪ್ರಕಾಶ್ ಎಂ.ಆರ್, ಎಸ್.ಕೆ.ಎಸ್.ಎಸ್.ಎಫ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಬಶೀರ್ ಅರಂಬೂರು ಮಾತನಾಡಿ ಶುಭಹಾರೈಸಿದರು.

. . . . . . .

ಭಾರತ ಸೇನೆಯಲ್ಲಿ ಸೇವೆಯಲ್ಲಿರುವ ಸಿ.ಆರ್.ಪಿ.ಎಫ್ ಇನ್ಸ್ಪೆಕ್ಟರ್ ಅನ್ವರ್ ಪೇರಡ್ಕ ಮತ್ತು ನಿವೃತ ಸೈನಿಕ ಪಸಿಲು ಅರಂತೋಡು ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅರಂತೋಡು ಜಮಾತ್ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ, ರಿಯಾಜ್ ಫೈಝಿ ಪೇರಡ್ಕ, ಸಂಪಾಜೆ ಗ್ರಾ.ಪಂ ಅಧ್ಯಕ್ಷ ಜಿ.ಕೆ ಹಮೀದ್, ಸಜ್ಜನ ಪ್ರತಿಷ್ಠಾನದ ಡಾ. ಉಮ್ಮರ್ ಬೀಜದಕಟ್ಟೆ, ಸುಳ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಹಾಜಿ ಕೆ.ಎಂ ಮುಸ್ತಫಾ, ಎಸ್. ಸಂಶುದ್ದೀನ್, ನಗರ ಪಂಚಾಯತ್ ಸದಸ್ಯ ಉಮ್ಮರ್ ಕೆ.ಎಸ್, ಹಾಜಿ ಎಸ್.ಎ ಹಮೀದ್ ಸುಳ್ಯ, ಹಾಜಿ ಅಬ್ಬಾಸ್ ಸಾಂಟ್ಯಾರ್, ಹಾಜಿ ಯು.ಹೆಚ್ ಅಬೂಬಕ್ಕರ್ ಮಂಗಳ, ಹಾಜಿ ಅಬ್ದುಲ್ ಖಾದರ್ ಬಯಂಬಾಡಿ, ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಅಬ್ದುಲ್ ಖಾದರ್ ಫೈಝಿ ಐವರ್ನಾಡು, ಎಸ್.ಕೆ.ಎಸ್.ಎಸ್.ಎಫ್ ಜಿಲ್ಲಾ ಉಪಾಧ್ಯಕ್ಷ ಜಮಾಲ್ ಬೆಳ್ಳಾರೆ, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಕರಾವಳಿ,ಯು.ಪಿ ಬಶೀರ್, ಅಬ್ದುಲ್ ರಜಾಕ್ ಕರಾವಳಿ, ಇಕ್ಬಾಲ್ ಸುಳ್ಯ ಅನ್ವರುಲ್ ಹುದಾ ಅಧ್ಯಕ್ಷ ಅಬ್ದುಲ್ ಮಜೀದ್, ರಫೀಕ್ ಬೆಳ್ಳಾರೆ, ಅಬ್ದುಲ್ ಖಾದರ್ ನೆಲ್ಯಡ್ಕ, ಆಶಿಕ್ ಅರಂತೋಡು ಉಪಸ್ಥಿತರಿದ್ದರು.

ವಲಯ ಪ್ರ.ಕಾರ್ಯದರ್ಶಿ ಆಶಿಕ್ ಸುಳ್ಯ ಸ್ವಾಗತಿಸಿ ವಂದಿಸಿದರು, ವಿಖಾಯ ಚೇರ್ಮನ್ ಕಲಂದರ್ ಎಲಿಮಲೆ ನಿರೂಪಿಸಿದರು


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading