75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮಂಡೆಕೋಲು ಗ್ರಾಮದ ಕನ್ಯಾನದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು ನಡೆಯಿತು. ಶಾಲಾ ಎಸ್.ಡಿ.ಎಂಸಿ. ಅಧ್ಯಕ್ಷ ಜನಾರ್ದನ ಮಿತ್ತಿಲ ಧ್ವಜಾರೋಹಣ ನೆರವೇರಿಸಿದರು.
ಆ ನಂತರ ಸ್ಪರ್ದಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಆಶಾಲತಾ ಕನ್ಯಾನ ಹಾಗೂ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀ ಮತಿ ಪ್ರಮೀಳಾ, ಸಹಶಿಕ್ಷಕಿ ಸುನಿತಾ ಮತ್ತು ನಿವೃತ್ತ ಶಿಕ್ಷಕಿ ಶ್ರೀಮತಿ ಕಾವೇರಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳು, ಪೋಷಕರು, ಅಂಗವಾಗಿ ಕಾರ್ಯಕರ್ತರ ಮತ್ತು ಗ್ರಾಮಸ್ಥರು ಹಾಜರಿದ್ದರು.