ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಂಡೋಡಿಯಲ್ಲಿ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಅವರು ಧ್ವಜಾರೋಹಣ ನೆರವೇರಿಸಲು ಆಗಮಿಸಿದ್ದರು.
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಮಾಧವ ಚಾಂತಾಳ ಅವರು ವಿದ್ಯಾರ್ಥಿ ನಾಯಕನ ಕೈಯಲ್ಲಿ ಧ್ವಜಾರೋಹಣ ಮಾಡಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ತಾರನಾಥ ಪೈಕ, ಶಾಲಾ ಮುಖ್ಯೋಪಾಧ್ಯಾಯರಾದ ಲಲಿತಾ ಕುಮಾರಿ ಕುಂಞೇಟಿ, ಸಹ ಶಿಕ್ಷಕರಾದ ಕವಿತಾ ಚಾಂತಾಳ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಉಪಾಧ್ಯಕ್ಷೆ ಹರ್ಷಕುಮಾರಿ, ಮೋಹನ್ ಬೆಂಡೋಡಿ ಹಾಗೂ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು, ಊರಿನವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.