- Thursday
- November 21st, 2024
ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ.ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲಿಸಿದರು. ಬಳಿಕ ಮಗುವನ್ನು ಸಿ.ಡಿ.ಪಿ.ಒ. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತೆಂದು...
ಅರಂತೋಡು ಗ್ರಾಮದ, ಕಲ್ಲುಗದ್ದೆ ಶೇಷಪ್ಪ ಮಾಸ್ಟರ್ (ವ.98)ರವರು ಅಲ್ಪಕಾಲದ ಅಸೌಖ್ಯದಿಂದ ಆ.18ರಂದು ಬೆಳಿಗ್ಗೆ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರರಾದ ನಿವೃತ್ತ ಶಿಕ್ಷಕ ಚಂದ್ರಶೇಖರ ಮಾಸ್ಟರ್ ಕಲ್ಲುಗದ್ದೆ, ವಸಂತ ಕಲ್ಲುಗದ್ದೆ, ನಿವೃತ್ತ ಶಿಕ್ಷಕ ಶಾಂತರಾಮ ಮಾಸ್ಟರ್ ಐವರ್ನಾಡು, ದುಗಲಡ್ಕ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟ್ರಮಣ ಮಾಸ್ಟರ್, ಪುತ್ರಿಯರಾದ ದಮಯಂತಿ ಶಿವಪ್ಪ ಐವರ್ನಾಡು,...
ಕೆ.ವಿ.ಜಿ ದಂತ ಮಹಾವಿದ್ಯಾಲಯದಲ್ಲಿ ಆ. 16 ರಂದು ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಎಸ್.ಆರ್. ರಂಗನಾಥನ್ ರವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹರಾಗಿದ್ದು, ಅವರ ಹುಟ್ಟು ಹಬ್ಬದ ಪ್ರಯುಕ್ತ ಪ್ರತಿ ವರ್ಷ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಗುತ್ತಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರೊಂದಿಗೆ ಆರಂಭಗೊಂಡಿತು. ಕೆ.ವಿ.ಜಿ ದಂತ ಮಹಾವಿದ್ಯಾಲಯದ ಪ್ರಾಂಸುಪಾಲರಾದ ಡಾ. ಮೋಕ್ಷಾ ನಾಯಕ್ ಗ್ರಂಥಾಲಯದ ಮಹತ್ವ ಮತ್ತು...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಂಡೋಡಿಯಲ್ಲಿ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಅವರು ಧ್ವಜಾರೋಹಣ ನೆರವೇರಿಸಲು ಆಗಮಿಸಿದ್ದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಮಾಧವ ಚಾಂತಾಳ ಅವರು ವಿದ್ಯಾರ್ಥಿ ನಾಯಕನ ಕೈಯಲ್ಲಿ ಧ್ವಜಾರೋಹಣ ಮಾಡಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...