ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಯ ಅನುದಾನಕ್ಕಾಗಿ ಸಚಿವ ಅಂಗಾರರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ರವರಿಗೆ ಮನವಿ ಮಾಡಲಾಗಿದೆ.
ಸಚಿವರಾದ ಅಂಗಾರ ರವರ ನೇತೃತ್ವದಲ್ಲಿ ವಿಕಾಸ ಸೌಧದ ಕಛೇರಿಯಲ್ಲಿ ಸಿ ಸಿ ಪಾಟೀಲ್ ರವರನ್ನು ಭೇಟಿಯಾಗಿ
ಸುಳ್ಯ ಕ್ಷೇತ್ರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿಗೆ ಹಾಗೂ ನೆರೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮೂಲಭೂತ ವ್ಯವಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ನೀಡುವಂತೆ ಕೋರಿಕೆ ಸಲ್ಲಿಸಿ, ಹಾನಿಗಳ ಗಂಭೀರತೆಯ ಬಗ್ಗೆ ಮನವರಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆ.ಎಫ್.ಡಿ.ಸಿ ನಿಗಮ ಅಧ್ಯಕ್ಷ ಎ. ವಿ. ತೀರ್ಥರಾಮ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಉಪಸ್ಥಿತರಿದ್ದರು.