ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಹಾಗೂ ಪಕ್ಷದ ಪ್ರಮುಖರ ಸಭೆ ಇಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜೀಪಿಲಿ ಪ್ರಸಕ್ತ ಚುನಾವಣಾ ವರ್ಷದಲ್ಲಿ ಪಕ್ಷದ ಕಾರ್ಯವೈಖರಿಯ ಬಗ್ಗೆ ಮಾರ್ಗದರ್ಶನ ನೀಡಿದರು ಹಾಗೂ ಸಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಸುಳ್ಯದಿಂದ 15000 ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಪಕ್ಷದ ಪ್ರಮುಖರು ಈ ಬಗ್ಗೆ ವಿಶೇಷವಾದ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚಿಸಿದರು.
ಪಕ್ಷದ ಪ್ರಮುಖರಾದ ರಾಧಾಕೃಷ ಬುಡಿಯಾರ್ ಮುಂದಿನ ದಿನಗಳಲ್ಲಿ ಸವಾಲುಗಳನ್ನು ಎದುರಿಸಿ ಪಕ್ಷವನ್ನು ಬಲಿಷ್ಟಗೊಳಿಸುವ ಬಗ್ಗೆ ಸೇರಿದ ಪ್ರಮುಖರಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ರೈತ ಮೋರ್ಚಾ ಅಧ್ಯಕ್ಷ ಎ ವಿ ತೀರ್ಥರಾಮ ಉಪಸ್ಥಿತರಿದ್ದರು. ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಮಂಡಲ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.