ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ 2022-23ನೇ ಸಾಲಿನಲ್ಲಿ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ. ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು, ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ಶಾಲೆ/ಕಾಲೇಜು/ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣಗೊಳಿಸಿ ಅರ್ಜಿ ಮತ್ತು ಇತರೆ ದಾಖಲೆಗಳನ್ನು ದಿನಾಂಕ :30.09.2022 ರೊಳಗಾಗಿ ಕಛೇರಿಗೆ ಸಲ್ಲಿಸಬೇಕೆಂದು ಸುಳ್ಯ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.
- Friday
- November 1st, 2024