
ಆಲೆಟ್ಟಿ ಗ್ರಾಮದ ವಿವಿಧ ಸಂಘಗಳ ಮತ್ತು ಕಾರ್ಕಳ ಯಶಸ್ವಿ ನಾಗರಿಕ ಸೇವಾ ಸಂಘ ಇದರ ಜಂಟಿ ಆಶ್ರಯದಲ್ಲಿ ಆ.28 ರಂದು ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿರುವುದು. ಬೆಳಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ 1.00 ರ ತನಕ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುವುದು. ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ತರಬೇಕು. ಪ್ರಸಾದ್ ನೇತ್ರಾಲಯದ ತಜ್ಞ ವೈದ್ಯರಿಂದ ಪರೀಕ್ಷಿಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದರು.