ಸುಳ್ಯ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಾಡಿಗೆ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಾಲ್ಲೂರಿನಿಂದ ಸುಳ್ಯ ತನಕ ನಡೆದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ಹಿಡಿದು, ಗಾಂಧಿ ಟೋಪಿ ಧರಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಸೇರಿದಂತೆ ಹಲವಾರು ಜೊತೆಯಾಗಿ ನಡೆದರು.
ಸಂದರ್ಭದಲ್ಲಿ ಕೇಪು ಸುಂದರ ಮಾಸ್ತರ್, ಹಾಜಿ ಇಸಾಕ್ ಸಾಹೇಬ್ ಮತ್ತು ಮಾರ್ಟಿನ್ ಕ್ರಾಸ್ತಾ ಅವರು ತ್ರಿವರ್ಣ ಬಲೂನ್ ಹಾರಿ ಬಿಡುವುದರ ಮೂಲಕ ಈ ಚಾಲನೆ ನೀಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ನೇತೃತ್ವದಲ್ಲಿ ಮಹಾತ್ಮಾಗಾಂಧಿಯವರು ಅಹಿಂಸಾ ಮಾರ್ಗದಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟರು. ಆ ಸ್ವಾತಂತ್ರ್ಯವನ್ನು ಉಳಿಸಬೇಕಾದ ಮತ್ತು ನಮ್ಮ ಸಂವಿಧಾನವನ್ನು ಸಂರಕ್ಷಿಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ವೇದಿಕೆ ಉಪ ನಾಯಕ ಯು.ಟಿ.ಖಾದರ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಪ್ಪಂಗಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಹೆಚ್.ಎಂ.ನಂದಕುಮಾರ್ ವೇದಿಕೆಯಲ್ಲಿ ಇದ್ದರು.