Ad Widget

ಗುತ್ತಿಗಾರು :- ಗ್ರಂಥಾಲಯ ಪಿತಾಮಹ ಡಾ.ಆರ್.ಎಸ್ ರಂಗನಾಥನ್ ರವರ ಜನ್ಮದಿನೋತ್ಸವ

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕಗಳ ಸಹಯೋಗದೊಂದಿಗೆ ಆ.30 ರಂದು ಪಂಚಾಯತ್ ಸಭಾಭವನದಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥ ರವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ, ಮಕ್ಕಳು ಬಿಡಿಸಿದ ರಂಗ ರವರ ಚಿತ್ರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

. . . . . .

ನಿವೃತ್ತ ಶಿಕ್ಷಕರು, ಜನಪದ ಸಂಶೋಧಕರು ರುದ್ರಚಾಮುಂಡಿ ಕುಶಾಲಪ್ಪ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಚಂದ್ರಶೇಖರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ “ಓದುವುದು, ಮಾತನಾಡುವುದು, ಬರೆಯುವುದು, ಆಲಿಸುವುದು, ಜೀವನಕ್ಕೆ ಪ್ರಮುಖವಾದದ್ದು, ಇಂತಹ ವ್ಯಕ್ತಿಗಳು ಜಗತ್ತಿನ ಪ್ರಮುಖ ವ್ಯಕ್ತಿಗಳು ಎಂದು ನಾವು ಈಗ ನಾವು ಮಾತನಾಡುತ್ತೇವೆ. ಮಾಹಿತಿಯ ಹಿಂದೆ ಹೋಗುತ್ತೇವೆ ಜ್ಞಾನದ ಹಿಂದೆ ಹೋಗುವುದಿಲ್ಲ. ವಿದ್ಯಾರ್ಥಿಗಳು ಪುಸ್ತಕಗಳಲ್ಲಿ ಆಸಕ್ತಿ ಬೆಳೆಸಿ ಜ್ಞಾನವಂತರಾಗಿ, ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು” ಎಂದು ಹೇಳಿದರು.

ಮುಖ್ಯ ಅತಿಥಿಗಳಾದ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗಳಾದ ಶ್ರೀಮತಿ ಗಾಯತ್ರಿ ಅವರು ಮಾತನಾಡುತ್ತಾ “ಮಕ್ಕಳು ಮೊಬೈಲ್ ನ ಹಿಂದೆ ಹೋಗಬಾರದು ಪುಸ್ತಕದ ಹಿಂದೆ ಹೋಗಬೇಕು. ಪುಸ್ತಕಗಳನ್ನು ಓದಿ ಜ್ಞಾನ ಸಂಪಾದಿಸಿದರೆ ಒಂದಲ್ಲ ಒಂದು ದಿನ ನಮ್ಮ ರಕ್ಷೆಯಾಗುತ್ತದೆ. ಜ್ಞಾನ ಸಂಪಾದನೆಯಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆ” ಎಂದರು. ಕಾರ್ಯಕ್ರಮದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ.ಬಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಕೋಶಾಧಿಕಾರಿ ದಯಾನಂದ ಆಳ್ವ, ಗ್ರಾಮ ಪಂಚಾಯತ್ ಸದಸ್ಯರಾದ ಲತಾ ಕುಮಾರಿ ಆಜಡ್ಕ ಉಪಸ್ಥಿತರಿದ್ದರು. ವಿಜಿತ್.ಎಂ.ಜಿ ವಳಲಂಬೆ, ದೃತಿ.ಎಂ.ಜೆ ನಡುಗಲ್ಲು ಶಾಲೆ ಮತ್ತು ಕನ್ನಿಕಾ.ಕೆ.ಜಿ ಗುತ್ತಿಗಾರು ಪ್ರೌಢಶಾಲಾ ವಿದ್ಯಾರ್ಥಿಗಳು ಗ್ರಂಥಾಲಯದ ಬಗ್ಗೆ ತಮ್ಮ ಅನಿಸಿಕೆಗಳನ್ನು ಉತ್ತಮ ರೀತಿಯಲ್ಲಿ ವ್ಯಕ್ತಪಡಿಸಿ ಅತಿಥಿಗಳಿಂದ ಪ್ರಶಂಸೆಗೆ ಭಾಜನರಾಗಿದ್ದಾರೆ. ಆ.09 ರಂದು ನಡೆದ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಜೇತರಾದ 35 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತು ಇದರ ಮಾಜಿ ಅಧ್ಯಕ್ಷರಾದ ಎ.ಕೆ ಹಿಮಕರ, ಸುಳ್ಯ ತಾಲೂಕು ಗ್ರಂಥಾಲಯ ಮೇಲ್ವಿಚಾರಕರ ಅಧ್ಯಕ್ಷರಾದ ಶ್ರೀಮತಿ ಸಾವಿತ್ರಿ ಕಣೆಮರಡ್ಕ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಚಂದ್ರಿಕಾ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಮಮತಾ, ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಶಿಕ್ಷಕರು, ಪೋಷಕರು, ಪಂಚಾಯತ್ ಸಿಬ್ಬಂದಿ ವರ್ಗದವರು, ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ಅಧ್ಯಕ್ಷರಾದ ಚಂದ್ರಶೇಖರ ಕಡೋಡಿ ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರ್ದೇಶಕರುಗಳಾದ ಯೋಗೀಶ್ ಹೊಸೊಳಿಕೆ ಹಾಗೂ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಇವರನ್ನು ಮುಖ್ಯ ಗ್ರಂಥಾಲಯ ಅಧಿಕಾರಿಗಳು ಈ ಸಂದರ್ಭದಲ್ಲಿ ಅಭಿನಂದಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಇದರ ಸದಸ್ಯರಾದ ಯೋಗೀಶ್ ಹೊಸೊಳಿಕೆ ಸ್ವಾಗತಿಸಿದರು, ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ದಿವ್ಯ ಸುಜನ್ ಗುಡ್ಡೆಮನೆ ಪ್ರಾರ್ಥಿಸಿದರು, ಗ್ರಾಮ ಪಂಚಾಯತ್ ಸಿಬ್ಬಂದಿ ಚೋಮಯ್ಯ.ಬಿ ಸ್ಪರ್ಧಾ ವಿಜೇತರ ವಿವರವನ್ನು ವಾಚಿಸಿದರು, ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಕಾರ್ಯಕ್ರಮ ನಿರೂಪಿಸಿದರು, ಕನ್ನಡ ಸಾಹಿತ್ಯ ಪರಿಷತ್ತು ಇದರ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ ಧನ್ಯವಾದ ಸಮರ್ಪಿಸಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!