
ಸ..ಹಿ.ಪ್ರಾ.ಶಾಲೆ ಕಲ್ಮಡ್ಕದಲ್ಲಿ ಆ. 29ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಪಂಜ ಇದರ ವತಿಯಿಂದ ನಡೆದ ಪಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕೆ.ಎಸ್.ಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.